ಬೆಟ್ಟಂಪಾಡಿ:ಬೆಳ್ತಂಗಡಿ ಹೋಲಿ ರಿಡೀಮರ್ ಶಾಲೆಯಲ್ಲಿ ನ.6ರಂದು ನಡೆದ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಯ ಕಥೆ ಹೇಳುವ ಸ್ಪರ್ಧೆಯಲ್ಲಿ ಬೆಟ್ಟಂಪಾಡಿ ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಅಭಿನವ್‌ರಾಜ್ ಎನ್. ಪ್ರಥಮ ಸ್ಥಾನ ಪಡೆದಿರುತ್ತಾರೆ.
ಇವರು ಪಟ್ಟೆ ಶ್ರೀ ಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಗುರು ರಾಜಗೋಪಾಲ ಎನ್. ಹಾಗೂ ಪಾಪೆಮಜಲು ಸರಕಾರಿ ಪ್ರೌಢಶಾಲೆಯ ಸಹ ಶಿಕ್ಷಕಿ ಸವಿತಾಪಟ್ಟೆ ದಂಪತಿಗಳ ಸುಪುತ್ರ.
ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದ ಮೂವರು ವಿದ್ಯಾರ್ಥಿಗಳು
ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ತೆಂಕಿಲ ಪುತ್ತೂರು ಇಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕಿರಿಯ ಪ್ರಾಥಮಿಕ ವಿಭಾಗದ ಸಂಸ್ಕೃತ ಧಾರ್ಮಿಕ ಪಠಣದಲ್ಲಿ 3ನೇ ತರಗತಿ ವಿದ್ಯಾರ್ಥಿ ಈಶಾನ ಪ್ರಥಮ ಸ್ಥಾನ ಪಡೆದಿರುತ್ತಾರೆ. ಹಿರಿಯ ಪ್ರಾಥಮಿಕ ವಿಭಾಗದ ಕಥೆ ಹೇಳುವ ಸ್ಪರ್ಧೆಯಲ್ಲಿ 7ನೇ ತರಗತಿ ವಿದ್ಯಾರ್ಥಿ ಅಭಿನವರಾಜ್ ಎನ್ ಪ್ರಥಮ ಸ್ಥಾನ ಹಾಗೂ ಕವನ ವಾಚನ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದು, ಪ್ರೌಢಶಾಲಾ ವಿಭಾಗದ ರಸಪ್ರಶ್ನೆ ಸ್ಪರ್ಧೆಯಲ್ಲಿ 9ನೇ ತರಗತಿ ವಿದ್ಯಾರ್ಥಿಗಳಾದ ಚಿಂತನ್ ರೈ ಹಾಗೂ ವಸುಶರ್ಮ ಪ್ರಥಮ ಸ್ಥಾನ ಹಾಗೂ ಸಂಸ್ಕೃತ ಭಾಷಣ ಸ್ಪರ್ಧೆಯಲ್ಲಿ 9ನೇ ತರಗತಿ ವಿದ್ಯಾರ್ಥಿ ವಸು ಶರ್ಮ ತೃತೀಯ ಸ್ಥಾನ ಪಡೆದುಕೊಂಡಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಮುಖ್ಯ ಶಿಕ್ಷಕ ರಾಜೇಶ್ ನೆಲ್ಲಿತಡ್ಕ , ಅಧ್ಯಾಪಕವೃಂದ ಹಾಗೂ ಆಡಳಿತ ಮಂಡಳಿ ಪ್ರಶಂಸೆ ವ್ಯಕ್ತಪಡಿಸಿರುತ್ತಾರೆ.