ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಜ್ಜಿಕಲ್ಲು ಒಕ್ಕೂಟದ ಸದಸ್ಯರಿಗೆ ಲಾಭಾಂಶ ವಿತರಣೆ

0

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಇದರ ವತಿಯಿಂದ ಸ್ವಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣಾ ಕಾರ್ಯಕ್ರಮ ಇತ್ತೀಚೆಗೆ ಧರ್ಮಸ್ಥಳದಲ್ಲಿ ನಡೆದಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗ್ರಾಮಾಭಿವೃದ್ಧಿ ಯೋಜನೆಯಿಂದ ಫಲ ಪಡೆದು ಲಾಭಾಂಶವನ್ನು ಸ್ವೀಕರಿಸಿರುವ ಎಲ್ಲರಿಗೂ ವಂದನೆಗಳನ್ನು ತಿಳಿಸಿದ್ದರು. ಅದರಂತೆ ಗ್ರಾಮಾಭಿವೃದ್ಧಿ ಯೋಜನೆಯ ಪುತ್ತೂರು ಇದರ ಬೆಟ್ಟಂಪಾಡಿ ವಲಯದ ಅಜ್ಜಿಕಲ್ಲು ಒಕ್ಕೂಟದ ಸದಸ್ಯರಿಗೆ ಲಾಭಾಂಶ ವಿತರಣಾ ಕಾರ್ಯಕ್ರಮ ದ.9 ರಂದು ಅಜ್ಜಿಕಲ್ಲು ಹಾಲಿನ ಸೊಸೈಟಿ ಬಳಿ ನಡೆಯಿತು.

ವಲಯ ಮೇಲ್ವಿಚಾರಕರಾದ ಸೋಹನ್ ಗೌಡರವರು ಲಾಭಾಂಶ ವಿತರಣೆ ಮಾಡಿ, ಧರ್ಮಸ್ಥಳ ಯೋಜನೆಯಿಂದ ಈ ಲಾಭಾಂಶದ ಫಲ ದೊರಕಿದ್ದು ಇದನ್ನು ಒಳ್ಳೆಯ ಕಾರ್ಯಗಳಿಗೆ ವಿನಿಯೋಗಿಸುವಂತೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಉಪಾಧ್ಯಕ್ಷ ಮೋಹನ್‌ಚಂದ್ರ, ಜತೆ ಕಾರ್ಯದರ್ಶಿ ಉಷಾ, ಸೇವಾ ಪ್ರತಿನಿಧಿ ತ್ರಿವೇಣಿ ಪಲ್ಲತ್ತಾರು ಹಾಗೂ ಸಂಘದ ಸದಸ್ಯರುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here