ಪುತ್ತೂರು: ಕರ್ನಾಟಕ ಪಬ್ಲಿಕ್ ಸ್ಕೂಲ್ ಕುಂಬ್ರದಲ್ಲಿ ವಾರ್ಷಿಕ ಕ್ರೀಡಾಕೂಟವು ದ.9ರಂದು ನಡೆಯಿತು. ಕ್ರೀಡಾಕೂಟವನ್ನು ಒಳಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರುರವರು ದೀಪ ಪ್ರಜ್ವಲನೆ ಮಾಡಿ ಕ್ರೀಡಾ ಜ್ಯೋತಿ ಹಸ್ತಾಂತರ ಮಾಡುವ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಒಳಮೊಗ್ರು ಗ್ರಾಪಂ ಉಪಾಧ್ಯಕ್ಷ ಅಶ್ರಫ್ ಉಜಿರೋಡಿ, ನೆಟ್ಟಣಿಗೆ ಮುಡ್ನೂರು ಪ್ರೌಢ ಶಾಲಾ ಕಾರ್ಯಾಧ್ಯಕ್ಷ ಶ್ರೀರಾಮ್ ಪಕ್ಕಳ, ಕುಂಬ್ರ ಶಾಲಾಭಿವೃದ್ಧಿ ಸಮಿತಿ ಮಾಜಿ ಅಧ್ಯಕ್ಷ ಶಿವರಾಮ ಗೌಡ ಇದ್ಯಪೆ, ಕುಂಬ್ರ ಕೆಪಿಎಸ್ ಕಾರ್ಯಾಧ್ಯಕ್ಷ ರಕ್ಷಿತ್ ರೈ ಮುಗೇರು, ಸದಸ್ಯರುಗಳಾದ ಕುಂಬ್ರ ದುರ್ಗಾಪ್ರಸಾದ್ ರೈ, ವಿನೋದ್ ಶೆಟ್ಟಿ ಮುಡಾಲ, ಅಶೋಕ್ ಪೂಜಾರಿ ಬೊಳ್ಳಾಡಿ, ರಝಾಕ್ ಪರ್ಪುಂಜ ಉಪಸ್ಥಿತರಿದ್ದರು. ಕೆಪಿಎಸ್ ಉಪ ಪ್ರಾಂಶುಪಾಲರಾದ ಮಮತಾ ಕೆ.ಎಸ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪ್ರಾಂಶುಪಾಲರಾದ ಶರ್ಮಿಳಾ ಗ್ಲೇಡಿಯಸ್ ಸ್ವಾಗತಿಸಿ, ಪ್ರಾಥಮಿಕ ವಿಭಾಗದ ಮುಖ್ಯಗುರು ಜ್ಯೂಲಿಯಾನ ಮೊರಾಸ್ ವಂದಿಸಿದರು.ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ವೃಂದದವರು ಸಹಕರಿಸಿದ್ದರು.