ಸವಣೂರು ಪ.ಪೂ ಕಾಲೇಜು, ಪ್ರೌಢಶಾಲಾ ವಿಭಾಗದ ಕ್ರೀಡಾಕೂಟ

0

ಪುತ್ತೂರು:ಸರಕಾರಿ ಪದವಿ ಪೂರ್ವ ಕಾಲೇಜು ಸವಣೂರು ಹಾಗೂ ಪ್ರೌಢಶಾಲಾ ವಿಭಾಗದ ವಾರ್ಷಿಕ ಕ್ರೀಡಾಕೂಟವು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯರವರು ದೀಪ ಪ್ರಜ್ವಲನೆಯ ಮೂಲಕ ಉದ್ಘಾಟಿಸಿದರು.


ಬಳಿಕ ಮಾತನಾಡಿದ ಶಾಸಕಿ ಭಾಗೀರಥಿ ಮುರುಳ್ಯರವರು, ವಿದ್ಯಾರ್ಥಿಗಳಲ್ಲಿ ಶಿಸ್ತು, ಸಂಯಮ, ಉತ್ತಮ ಆರೋಗ್ಯ, ಸದೃಢ ಮನಸ್ಸು ಮೈಗೂಡಿಸಿಕೊಳ್ಳಲು ಕ್ರೀಡೆ ಅತ್ಯಗತ್ಯ. ಈ ದೇಶದ ಭವಿಷ್ಯ ಯುವಶಕ್ತಿಯ ಮೇಲೆ ನಿಂತಿದೆ. ಆರೋಗ್ಯವಂತ ಸಮಾಜವನ್ನು ರೂಪಿಸುವಲ್ಲಿ ಕ್ರೀಡೆ ಬಹಳ ಮಹತ್ವದ ಪಾತ್ರವನ್ನು ವಹಿಸುತ್ತಿದೆ ಎಂದರು.


ವಾರ್ಷಿಕ ಕ್ರೀಡಾಕೂಟದಲ್ಲಿ ಪ್ರೌಢಶಾಲಾ ವಿಭಾಗದ ಮೂರು ತಂಡಗಳು ಹಾಗೂ ಪದವಿ ಪೂರ್ವ ಕಾಲೇಜಿನ ನಾಲ್ಕು ತಂಡಗಳು ಕ್ರೀಡಾ ಸಮವಸ್ತ್ರಗಳೊಂದಿಗೆ, ಆಕರ್ಷಕ ಬ್ಯಾಂಡ್ ನೊಂದಿಗೆ ಪಥಸಂಚಲನ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಶಾಸಕಿ ಭಾಗೀರಥಿ ಮುರುಳ್ಯರವರು ಗೌರವ ವಂದನೆಯನ್ನು ಸ್ವೀಕರಿಸಿದರು. ಕಡಬ ತಾಲೂಕು ಪಂಚಾಯಿತಿನ ಕಾರ್ಯನಿರ್ವಹಣಾಧಿಕಾರಿಗಳಾದ ನವೀನ್ ಕುಮಾರ್ ಭಂಡಾರಿರವರು ಧ್ವಜಾರೋಹಣ ನೆರವೇರಿಸಿ ಸಂಸ್ಥೆಯ ಬಗ್ಗೆ ಪ್ರಶಂಸೆಯ ಮಾತುಗಳ ಮೂಲಕ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.


ವೇದಿಕೆಯಲ್ಲಿ ಕಟ್ಟಡ ಸಮಿತಿಯ ಅಧ್ಯಕ್ಷ ಕೃಷ್ಣಕುಮಾರ್ ರೈ, ವಿಶ್ರಾಂತ ಪ್ರಾಂಶುಪಾಲ ಬಿ.ವಿ.ಸೂರ್ಯನಾರಾಯಣ, ಗ್ರಾಮ ಪಂಚಾಯತ್ ಸದಸ್ಯರುಗಳಾದ ರಜಾಕ್, ರಫೀಕ್, ತೀರ್ಥರಾಮ ಕೆಡಂಜಿ, ರಾಜೀವಿ ಶೆಟ್ಟಿ, ಮಾಜಿ ಅಧ್ಯಕ್ಷರಾದ ಚಂದ್ರಾವತಿ ಸುಣ್ಣಾಜೆ, ಇಂದಿರಾ ಬೇರಿಕೆ, ನ್ಯಾಯವಾದಿ ಮಹೇಶ್, ಯುವಜನ ಒಕ್ಕೂಟದ ಜಿಲ್ಲಾಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು, ತಾಲೂಕು ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಕುಮಾರಿ ರಾಜೇಶ್ವರಿ, ಎಸ್.ಡಿ.ಎಂ.ಸಿ ಅಧ್ಯಕ್ಷ ರಾಧಾಕೃಷ್ಣ, ಎಪಿಎಂಸಿ ಮಾಜಿ ಅಧ್ಯಕ್ಷ ದಿನೇಶ್ ಮೆದು, ರಾಕೇಶ್ ರೈ ಕೆಡಂಜಿ, ಸದಸ್ಯರಾದ ತಾರನಾಥ, ಗ್ರಾಮ ಪಂಚಾಯಿತಿ ಅಧಿಕಾರಿ ದಯಾನಂದ ಮಾಲೆತ್ತಾರು, ಶಿಕ್ಷಕರಾದ ಸಂತೋಷ್ ಕುಮಾರ ಮಂಗಲ, ಉಪಸ್ಥಿತರಿದ್ದರು.


ಪದವಿ ಪೂರ್ವ ಕಾಲೇಜು ಪ್ರಾಂಶುಪಾಲೆ ಪದ್ಮಾವತಿ ಎನ್.ಪಿರವರು ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಮಾಮಚ್ಚನ್ ಎಂ. ಪ್ರ್ರಾಸ್ತಾವಿಕವಾಗಿ ಮಾತನಾಡಿ, ಕ್ರೀಡಾಂಗಣದ ವಿಸ್ತರಣೆಗೆ ಹಾಗೂ ರಂಗಮಂದಿರ ನಿರ್ಮಾಣಕ್ಕೆ ಬೇಡಿಕೆಗಳನ್ನು ಇಟ್ಟು ಶಾಸಕರಿಗೆ ಮನವಿಯನ್ನು ಸಲ್ಲಿಸಿದರು. ಕುಮಾರಿ ಗ್ರೀಷ್ಮ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಕ್ರೀಡಾಕೂಟಕ್ಕೆ ಸಹಕಾರವನ್ನು ನೀಡುತ್ತಿರುವ ಪ್ರೌಢಶಾಲಾ ಮುಖ್ಯಸ್ಥರಾದ ರಘು ಬಿ.ಆರ್ ವಂದಿಸಿದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಶಿಕ್ಷಕ ಕಿಶನ್ ಬಿ.ವಿ ಹಾಗೂ ಕು|ದಿವ್ಯ ಕಾರ್ಯಕ್ರಮ ನಿರೂಪಿಸಿದರು. ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢಶಾಲಾ ವಿಭಾಗದ ಶಿಕ್ಷಕರು, ಉಪನ್ಯಾಸಕರು, ಬೋಧಕೇತರ ಸಿಬ್ಬಂದಿಗಳು, ಮಾರ್ ಇವಾನಿಯೋಸ್ ಬಿಎಡ್ ಕಾಲೇಜು, ಕುಂತೂರು ಪ್ರಶಿಕ್ಷಣಾರ್ಥಿಗಳು ಕ್ರೀಡಾಕೂಟದ ಯಶಸ್ವಿಗೆ ಕ್ರೀಡಾ ಶಿಕ್ಷಕರಾಗಿ ಸಹಕರಿಸಿದರು. ಸವಣೂರು ಯುವಕಮಂಡಲ, ಹಿರಿಯ ವಿದ್ಯಾರ್ಥಿ ಸಂಘ, ಪೋಷಕ ವೃಂದ, ಹಾಗೂ ಸಂಸ್ಥೆಯ ವಿದ್ಯಾರ್ಥಿಗಳು ಸಹಕರಿಸಿದರು.

ಶೌಚಾಲಯ ಕಟ್ಟಡ ಉದ್ಘಾಟನೆ..
ಬೆಳಿಗ್ಗೆ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ಸುಮಾರು 7.30 ಲಕ್ಷ ರೂಪಾಯಿ ಅಂದಾಜು ವೆಚ್ಚದಲ್ಲಿ ನಿರ್ಮಿತವಾದ ಹೊಸ ಶೌಚಾಲಯ ಕಟ್ಟಡವನ್ನು ಶಾಸಕಿ ಭಾಗೀರಥಿ ಮುರಳ್ಯರವರು ಉದ್ಘಾಟಿಸಿದರು. ಹಾಗೆಯೇ ಪದವಿಪೂರ್ವ ವಿಭಾಗದ ಶೌಚಾಲಯ ಕಟ್ಟಡವನ್ನು ಸವಣೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಜಯಶ್ರೀ ಉದ್ಘಾಟಿಸಿದರು. ಎರಡು ಕಟ್ಟಡಗಳ ಕಾಮಗಾರಿಯನ್ನು ನಿರ್ವಹಿಸಿದ ಗ್ರಾಮ ಪಂಚಾಯತ್ ಸದಸ್ಯ ಸತೀಶ್ ಅಂಗಡಿಮೂಲೆರವರನ್ನು ಇದೇ ಸಂದರ್ಭದಲ್ಲಿ ಶಾಸಕರು ಸನ್ಮಾನಿಸಿ ಅಭಿನಂದಿಸಿದರು.

ಕ್ರೀಡಾಜ್ಯೋತಿ..ಗೌರವ..ಕ್ರೀಡಾ ಭೀಷ್ಮ ಬಿರುದು..
ಉಭಯ ಸಂಸ್ಥೆಗಳ ಕಾರ್ಯಧ್ಯಕ್ಷರಾದ ಗಿರಿಶಂಕರ ಸುಲಾಯರವರು ಕ್ರೀಡಾಜ್ಯೋತಿಯನ್ನು ಬೆಳಗಿಸಿದರು. ಈ ಸಂದರ್ಭದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಹಾಗೂ ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ನವೀನ್ ಭಂಡಾರಿರವರನ್ನು ಸಂಸ್ಥೆಯ ಪರವಾಗಿ ಗೌರವಿಸಲಾಯಿತು. ಕ್ರೀಡಾ ಕ್ಷೇತ್ರಕ್ಕೆ ಅವಿಸ್ಮರಣೀಯ ಕೊಡುಗೆಯನ್ನು ನೀಡಿದ ಪದವಿಪೂರ್ವ ವಿಭಾಗದ ಉಪನ್ಯಾಸಕರಾದ ರಾಜೀವ್ ಶೆಟ್ಟಿರವರಿಗೆ ಕ್ರೀಡಾ ಭೀಷ್ಮ ಬಿರುದನ್ನು ನೀಡಿ ಶಾಸಕರು ಗೌರವಿಸಿ ಅಭಿನಂದಿಸಿದರು.

LEAVE A REPLY

Please enter your comment!
Please enter your name here