ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಇನ್ನಿಲ್ಲ

0

ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ರವರು(92.ವ) ಡಿ.10 ರಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್​​ಎಂ ಕೃಷ್ಣ ಅವರನ್ನು ಮೊದಲು ವೈದೇಹಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಬಳಿಕ ಶ್ವಾಸಕೋಶದ ಸೋಂಕು ಕಾಣಿಸಿಕೊಂಡ ಹಿನ್ನಲೆ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು. ಡಾ. ಸತ್ಯನಾರಾಯಣ ಮೈಸೂರು, ಡಾ. ಸುನೀಲ್ ಕಾರಂತ್ ನೇತೃತ್ವದ ವೈದ್ಯರ ತಂಡ ಚಿಕಿತ್ಸೆಯನ್ನು ನೀಡಿತ್ತು. ಶ್ವಾಸಕೋಶದ ಸೋಂಕಿನ ಕಾರಣಕ್ಕೆ ಕೃಷ್ಣ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಐಸಿಯುಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಬಹುಕಾಲ ಕಾಂಗ್ರೆಸ್ ಪಕ್ಷದಲ್ಲಿದ್ದ ಎಸ್ಎಂ ಕೃಷ್ಣ ಅವರು ಬದಲಾದ ರಾಜಕೀಯ ಸನ್ನಿವೇಶಗಳಿಂದ ಬಿಜೆಪಿಗೆ 2017 ರಲ್ಲಿ ಸೇರ್ಪಡೆಗೊಂಡಿದ್ದರು.

ಕರ್ನಾಟಕ ರಾಜ್ಯದ ಮಂತ್ರಿಯಾಗಿ, ಮುಖ್ಯಮಂತ್ರಿಗಳಾಗಿ 50 ವರ್ಷಗಳ ಕಾಲ ಅವರು ರಾಜಕೀಯ ಮಾಡಿದ್ದರು. ಮುಖ್ಯಮಂತ್ರಿಯಾಗಿ ,ಕೇಂದ್ರ ಸಚಿವರಾಗಿ, ಬೆಂಗಳೂರು ನಗರದಲ್ಲಿ ಐ.ಟಿ.ಬಿ.ಟಿ ಸ್ಥಾಪನೆಗೆ ಕಾರಣರಾಗಿದ್ದರು.

ಬೆಂಗಳೂರಿನ ವಿಕಾಸಸೌಧವನ್ನು ನಿರ್ಮಿಸಿದ್ದು ಎಸ್ಎಂ ಕೃಷ್ಣನವರ ಆಡಳಿತದ ಅವಧಿಯಲ್ಲಿ. ಸಿಲಿಕಾನ್ ಸಿಟಿಯಾಗಿ ಬೆಂಗಳೂರು ಅಂತರ ರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧಿ ಪಡೆಯಲು ಇವರು ಕಾರಣೀಭೂತರಾಗಿದ್ದ ಎಸ್.ಎಂ. ಕೃಷ್ಣ ಅವರು ನಿಧನರಾಗಿದ್ದಾರೆ.

LEAVE A REPLY

Please enter your comment!
Please enter your name here