ಅಂಬಿಕಾದಲ್ಲಿ ಪರೀಕ್ಷೆಗಳನ್ನೆದುರಿಸುವ ಬಗೆಗೆ ಮಾಹಿತಿ ಕಾರ್ಯಾಗಾರ

0

ಹಿಂದಿನ ದಾಖಲೆ ಅಳಿಸಿ ನೂತನ ಸಾಧ್ಯತೆ ಅನಾವರಣಗೊಳ್ಳಬೇಕು : ಸುಬ್ರಹ್ಮಣ್ಯ ನಟ್ಟೋಜ

ಪುತ್ತೂರು: ಶೈಕ್ಷಣಿಕ ಸಹ ಚಟುವಟಿಕೆಗಳಾದ ವಾರ್ಷಿಕ ಕ್ರೀಡಾಕೂಟ, ವಾರ್ಷಿಕೋತ್ಸವಗಳ ನಂತರ ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆ ಹಾಗೂ ಜೆಇಇ, ನೀಟ್ ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧರಾಗಬೇಕಿದೆ. ಹಿಂದಿನ ವರ್ಷದ ಹಿರಿಯ ವಿದ್ಯಾರ್ಥಿಗಳ ದಾಖಲೆಯನ್ನು ಅಳಿಸಿ ಅದಕ್ಕಿಂತಲೂ ಉನ್ನತ ಅಂಕಗಳನ್ನು ಪಡೆಯುವ ಗುರಿಯೊಂದಿಗೆ ಮುನ್ನುಗ್ಗಬೇಕಿದೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು.


ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಪ್ಪಳಿಗೆಯ ಅಂಬಿಕಾ ಕ್ಯಾಂಪಸ್‌ನ ಶ್ರೀ ಶಂಕರ ಸಭಾಭವನದಲ್ಲಿ ಆಯೋಜಿಸಲಾದ ಸ್ಪರ್ಧಾತ್ಮಕ ಪರೀಕ್ಷೆಗಳ ಬಗೆಗಿನ ಮಾಹಿತಿ ಕಾರ್ಯಕ್ರಮವನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದರು.


ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಡಾ. ಪುಷ್ಪರಾಜ್ ಮಾತನಾಡಿ ಯಾವುದೂ ಕಷ್ಟ ಅಲ್ಲ. ಇಷ್ಟಪಟ್ಟು ಕಠಿಣ ಪರಿಶ್ರಮದಿಂದ ಕಲಿತಾಗ ಯಶಸ್ಸು ಸಿದ್ಧಿಸುವುದು ಎಂದು ಹೇಳಿದರಲ್ಲದೆ ಸ್ಪರ್ಧಾತ್ಮಕ ಪರೀಕ್ಷೆಗಳಾದ ಸಿಇಟಿ, ನೀಟ್, ಜೆಇಇ ಹಾಗೂ ದ್ವಿತೀಯ ಪಿಯುಸಿ ಇಲಾಖಾ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ಕ್ರಮ, ಪಿಯುಸಿ ನಂತರದ ಕೋರ್ಸ್‌ಗಳ ಬಗ್ಗೆ ಮಾಹಿತಿ ನೀಡಿ ಪ್ರಶ್ನೋತ್ತರದ ಮೂಲಕ ವಿದ್ಯಾರ್ಥಿಗಳ ಸಂಶಯ ನಿವಾರಿಸಿದರು.


ನಟ್ಟೋಜ ಫೌಂಡೇಶನ್ ಟ್ರಸ್ಟ್‌ನ ಕಾರ್ಯದರ್ಶಿ ರಾಜಶ್ರೀ ಎಸ್ ನಟ್ಟೋಜ ಹಾಗೂ ಉಪನ್ಯಾಸಕ ಕೇಶವ ಕಿಶೋರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಅನ್ವಿತಾ ಮತ್ತು ತಂಡದವರು ಪ್ರಾರ್ಥಿಸಿದರು ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯ ಸ್ವಾಗತಿಸಿದರು. ವಿದ್ಯಾರ್ಥಿನಿಯರಾದ ಅನ್ವಿತಾ ಮತ್ತು ತಂಡದವರು ಪ್ರಾರ್ಥಿಸಿದರು. ವಿದ್ಯಾರ್ಥಿನಿ ಅಪೂರ್ವ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here