ಪೆರುವಾಜೆ ಜಲದುರ್ಗಾದೇವಿ ದೇವಾಲಯದ ವಾರ್ಷಿಕ ಜಾತ್ರೆ-ಚಪ್ಪರ ಮುಹೂರ್ತ

0

ಪುತ್ತೂರು: ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದಲ್ಲಿ ಜ.16 ರಿಂದ 21 ರ ತನಕ‌ ನಡೆಯಲಿರುವ ಜಾತ್ರಾ ಮಹೋತ್ಸವ ಹಾಗೂ‌ ಬ್ರಹ್ಮರಥೋತ್ಸವ ಪ್ರಯುಕ್ತ ಚಪ್ಪರ ಮುಹೂರ್ತ ದ.10 ರಂದು ನಡೆಯಿತು.

ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿತು.

ಕ್ಷೇತ್ರದ ಆಡಳಿತಾಧಿಕಾರಿ ಜಯಪ್ರಕಾಶ್ ಅಲೆಕ್ಕಾಡಿ, ಪೆರುವಾಜೆ ಗ್ರಾ.ಪಂ. ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು, ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ, ಕುಂಬ್ರ ದಯಾಕರ ಆಳ್ವ, ಮಾಜಿ ಸದಸ್ಯರಾದ ಬೋಜರಾಜ ಶೆಟ್ಟಿ ಕಲ್ಕಂಪಾಡಿಗುತ್ತು, ನಾರಾಯಣ ಕೊಂಡೆಪ್ಪಾಡಿ, ಪೆರುವಾಜೆ ಗ್ರಾ.ಪಂ.ಮಾಜಿ ಉಪಾಧ್ಯಕ್ಷ ಸುನಿಲ್ ರೈ ಪೆರುವಾಜೆ, ಮಾಜಿ ಸೈನಿಕ ಸುದಾನಂದ, ಕ್ಷೇತ್ರದ ಕಚೇರಿ ವ್ಯವಸ್ಥಾಪಕ ವಸಂತ ಪೆರುವಾಜೆ, ಮೋನಪ್ಪ ಪೂಜಾರಿ, ವಿಜಯ ಪೆರುವಾಜೆ, ಬಾಲಕೃಷ್ಣ ಆಚಾರ್ಯ, ಧರ್ಮಪಾಲ, ರವಿಚಂದ್ರ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here