ಪುತ್ತೂರು: ಬೆಳ್ತಂಗಡಿಯ ಹೋಲಿ ರೆಡಿಮರ್ ಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಅಲಂಕಾರು ಇಲ್ಲಿನ 6ನೇ ತರಗತಿ ಆಂಗ್ಲ ಮಾಧ್ಯಮದ ವಿದ್ಯಾರ್ಥಿನಿ ಶಾರ್ವಿ ಯು.ಎಸ್ ಹಿರಿಯರ ವಿಭಾಗದ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಶಾರ್ವಿ ಅಲಂಕಾರು ಗ್ರಾಮದ ಕೇಪುಳು ನಿವಾಸಿ ಉಮೇಶ್ ಹಾಗೂ ಸುಜಾತ ದಂಪತಿಗಳ ಪುತ್ರಿ. ವಿದ್ಯಾರ್ಥಿನಿ ಈ ಸಾಧನೆಗೆ ಶಾಲಾ ಮುಖ್ಯ ಗುರುಗಳು ,ಸಹ ಶಿಕ್ಷಕರು, ಎಸ್ ಡಿ ಎಂ ಸಿ ಅಧ್ಯಕ್ಷರು ಮತ್ತು ಸದಸ್ಯರು, ಶಾಲಾ ಮಕ್ಕಳು ಮತ್ತು ಪೋಷಕರು, ಮಾತೃ ಸಂಘದವರು, ಅಡುಗೆ ಸಿಬ್ಬಂದಿ ವರ್ಗದವರು, ಹಿರಿಯ ವಿದ್ಯಾರ್ಥಿ ಸಂಘದವರು ಶುಭ ಹಾರೈಸಿದ್ದಾರೆ.