ಪುತ್ತೂರು: ಬಲ್ನಾಡು ಗ್ರಾಮ ಅರಣ್ಯ ಸಮಿತಿ ಕಾರ್ಯಕಾರಿಣಿಯ ಮುಂದಿನ 5 ವರ್ಷಕ್ಕೆ ನೂತನ ಅಧ್ಯಕ್ಷರಾಗಿ ಸಾಜ ರಾಧಾಕೃಷ್ಣ ಆಳ್ವ ಆಯ್ಕೆಯಾಗಿದ್ದಾರೆ.
ಡಿ.4 ರಂದು ಬಲ್ನಾಡು ಗ್ರಾಮದ ಸಾಜ ಸ.ಹಿ.ಪ್ರಾ.ಶಾಲೆಯಲ್ಲಿ ನಡೆದ ನೂತನ ಪದಾಧಿಕಾರಿಗಳ ಆಯ್ಕೆಯಲ್ಲಿ ಅವರನ್ನು ಆಯ್ಕೆ ಮಾಡಲಾಗಿದೆ. ಸಮಿತಿಯಲ್ಲಿ 172 ಮಂದಿ ಸದಸ್ಯರ ಪೈಕಿ ಚಂದಪ್ಪ ಪೂಜಾರಿ ಕೆ, ಸುಂದರ ಎಂ, ಕುಟ್ಟಿ ನಲಿಕೆ . ಕೆ, ಪ್ರವೀಣಚಂದ್ರ ಆಳ್ವ, ಅಣ್ಣಿ ಪೂಜಾರಿ ಸಾರ್ಯ, ಉಷಾ ಸಾಜ, ಕಮಲಾಕ್ಷಿ ಸಾಜ, ವಸಂತಿ ಸಾಜ, ನಳಿನಿ ಕೆ, ಕುಸುಮ ಎಂ ಅವರನ್ನು ನಿರ್ದೇಶಕರಾಗಿ ಆಯ್ಕೆಯಾದರು.
ಗ್ರಾಮ ಅರಣ್ಯ ಸಮಿತಿಯ ಸದಸ್ಯ ಕಾರ್ಯದರ್ಶಿ ಉಪವಲಯ ಅರಣ್ಯಾಧಿಕಾರಿ ವೀರಣ್ಣ, ಪುತ್ತೂರು ವಲಯ ಅರಣ್ಯಾಧಿಕಾರಿ ಕಿರಣ್ ಬಿ.ಎಂ ಈ ಸಂದರ್ಭ ಉಪಸ್ಥಿತರಿದ್ದರು. ಪುತ್ತೂರು ಹೋಬಳಿಯ ಕಂದಾಯ ನಿರೀಕ್ಷಕ ಕೆ.ಟಿ.ಗೋಪಾಲ ಚುನಾವಣಾಧಿಕಾರಿಯಾಗಿದ್ದರು.