ದೆಹಲಿ; ದೆಹಲಿ ಕರ್ನಾಟಕ ಸಂಘದಲ್ಲಿ ರಾಜ್ಯೋತ್ಸವ ಸಂಭ್ರಮವನ್ನು ನ.24ರಂದು ಆಚರಿಸಲಾಯಿತು. ಸಂಘದ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಧಾ ಮೂರ್ತಿ ಮುಖ್ಯ ಅತಿಥಿ ಭಾಗವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ಕಾಸರಗೋಡು ಆಲಂಪಾಡಿ ಮೂಲದ ರಾಜೇಶ್ವರಿ ಭಟ್ ಸೇರಿದಂತೆ ಸರವು ಕೃಷ್ಣಭಟ್, ಡಾ.ಕೆ.ಯಸ್.ಸೋಮಶೇಖರ್ ಮತ್ತು ಬಸ್ತಿ ದಿನೇಶ್ ಶೆಣೈ ಅವರನ್ನು ವಿಶಿಷ್ಟ ಕನ್ನಡಿಗ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಸಂಘದ ಅಧ್ಯಕ್ಷ ಸಿ.ಎಮ್.ನಾಗರಾಜ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ವಿದೇಶಾಂಗ ಇಲಾಖೆಯ ಸಹಕಾರ್ಯದರ್ಶಿ ಡಾ.ಕೆ.ಜೆ.ಶ್ರೀನಿವಾಸ್ ಭಾಗವಹಿಸಿದ್ದರು. ಕರ್ನಾಟಕದ ವಿವಿಧ ಭಾಗದ ಹಲವಾರು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.