ನಿಡ್ಪಳ್ಳಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಬೆಟ್ಟಂಪಾಡಿ ವಲಯದ ರೆಂಜ ಒಕ್ಕೂಟದ ತ್ರೈಮಾಸಿಕ ಸಭೆ ಒಕ್ಕೂಟದ ಅಧ್ಯಕ್ಷ ಬಾಲಕೃಷ್ಣ. ಡಿ ಇವರ ಅಧ್ಯಕ್ಷತೆಯಲ್ಲಿ ಡಿ.8 ರಂದು ಬೆಟ್ಟಂಪಾಡಿ ಪ್ರಿಯದರ್ಶಿನಿ ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆಯಿತು.
ನಂತರ ಒಕ್ಕೂಟದ ಸದಸ್ಯರಿಗೆ ವಾರ್ಷಿಕ ಕ್ರೀಡಾ ಕೂಟ ನಡೆಯಿತು.ಪ್ರಿಯದರ್ಶಿನಿ ಆಂಗ್ಲಮಾಧ್ಯಮ ಶಾಲೆಯ ಅಧ್ಯಕ್ಷ ರಂಗನಾಥ ರೈ ಗುತ್ತು ಕ್ರೀಡಾಕೂಟ ಉದ್ಘಾಟಿಸಿದರು. ಬೆಟ್ಟಂಪಾಡಿ ವಲಯಾಧ್ಯಕ್ಷ ಬಾಲಕೃಷ್ಣ. ಕೆ , ಪ್ರಿಯದರ್ಶಿನಿ ಆಂಗ್ಲಮಾಧ್ಯಮ ಶಾಲೆಯ ಮುಖ್ಯ ಗುರು ರಾಜೇಶ್ ನೆಲ್ಲಿತ್ತಡ್ಕ, ಯೋಜನೆಯ ವಲಯ ಮೆಲ್ವೀಚಾರಕ ಸೋಹನ್. ಜಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಒಕ್ಕೂಟದ ಪಯಶ್ವಿನಿ ಮತ್ತು ಮಾತೃಶ್ರೀ ಸಂಘದ ಸದಸ್ಯರಿಗೆ ವಲಯ ಮೆಲ್ವೀಚಾರಕ ಸೋಹನ್. ಜಿ ಈ ಸಂದರ್ಭದಲ್ಲಿ ಸಾಂಕೇತಿಕವಾಗಿ ಲಾಭಾಂಶ ವಿತರಿಸಿದರು.ಒಕ್ಕೂಟದ ಕಾರ್ಯದರ್ಶಿ ಪ್ರೇಮಲತಾ ಸ್ವಾಗತಿಸಿ, ಕೋಶಾಧಿಕಾರಿ ಯಾಮಿನಿ ವಂದಿಸಿದರು. ಸೇವಾ ಪ್ರತಿನಿಧಿ ಜಗನ್ನಾಥ ಪಾಟಾಳಿ ಕಾರ್ಯಕ್ರಮ ನಿರೂಪಿಸಿದರು.ಒಕ್ಕೂಟದ ಉಪಾಧ್ಯಕ್ಷೆ ನಳಿನಿ,ಜತೆ ಕಾರ್ಯದರ್ಶಿ ಅಕ್ಕು ಮತ್ತು ಒಕ್ಕೂಟದ ಸದಸ್ಯರು ಸಹಕರಿಸಿದರು.