ಪುತ್ತೂರು: ಬೊಳುವಾರಿನಲ್ಲಿ ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆ ಎದುರುಗಡೆ ಆಟೋ ರಿಕ್ಷಾವೊಂದು ಪಲ್ಟಿಯಾಗಿ ರಿಕ್ಷಾದಲ್ಲಿದ್ದ ಮಹಿಳೆಯೋರ್ವರಿಗೆ ಸಣ್ಣ ಪುಟ್ಟ ಗಾಯವಾದ ಘಟನೆ ನಡೆದಿದೆ.
ಬೊಳುವಾರು ಕಡೆ ಹೋಗುತ್ತಿದ್ದ ಆಟೋ ರಿಕ್ಷಾವೊಂದಕ್ಕೆ ಆಗುವ ಅಪಘಾತ ತಪ್ಪಿಸಲು ಹೋದ ಪುತ್ತೂರು ಬಸ್ ನಿಲ್ದಾಣದ ಕಡೆ ಬರುತ್ತಿದ್ದ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಪಲ್ಟಿಯಾದ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಆತೂರಿನ ಮಹಿಳೆಯೋರ್ವರಿಗೆ ಸಣ್ಣ ಪುಟ್ಟ ಗಾಯಗಳಾಗಿ ಪ್ರಾಣಪಾಯದಿಂದ ಪಾರಾಗಿದ್ದಾರೆ.
ಗಾಯಾಳುವನ್ನು ಕೂಡಲೇ ಪ್ರಗತಿ ಆಸ್ಪತ್ರೆಯ ಮ್ಯಾನೇಜರ್ ವಿಠಲ ಆಸ್ಪತ್ರೆಗೆ ದಾಖಲಿಸಲು ಸಹಕರಿಸಿದರು.