ಉಪ್ಪಿನಂಗಡಿ: ಪುತ್ತೂರು ನಗರಸಭೆಗೆ ಪೂರೈಕೆಯಾಗುವ ಜಲಸಿರಿ ಯೋಜನೆಯ ಶುದ್ಧ ಕುಡಿಯುವ ನೀರನ್ನು ಇಡೀ ನೆಕ್ಕಿಲಾಡಿ ಗ್ರಾಮಕ್ಕೆ ಒದಗಿಸಬೇಕೆಂದು 34 ನೆಕ್ಕಿಲಾಡಿಯ ಗ್ರಾ.ಪಂ. ಸದಸ್ಯರು ಪುತ್ತೂರು ನಗರ ಸಭೆಯ ಪೌರಾಯುಕ್ತರಾದ ಮಧು ಎಸ್. ಮನೋಹರ್ ಅವರಿಗೆ ಮನವಿ ನೀಡಿದ್ದಾರೆ.
34 ನೆಕ್ಕಿಲಾಡಿಯಲ್ಲಿ ಎರಡು ಕೊಳವೆ ಬಾವಿಗಳ ನೀರು ಕುಡಿಯಲು ಯೋಗ್ಯವಿಲ್ಲವೆಂದು ಪ್ರಯೋಗಾಲಯದಿಂದ ವರದಿ ಬಂದಿದೆ. ಆದ್ದರಿಂದ 34 ನೆಕ್ಕಿಲಾಡಿಯಿಂದ ಪುತ್ತೂರು ನಗರಸಭೆಗೆ ಪೂರೈಕೆಯಾಗುವ ಜಲಸಿರಿ ಯೋಜನೆಯ ಶುದ್ಧ ಕುಡಿಯುವ ನೀರನ್ನು 34 ನೆಕ್ಕಿಲಾಡಿ ಗ್ರಾ.ಪಂ. ವ್ಯಾಪ್ತಿಗೆ ನೀಡಬೇಕು ಎಂದು ಅವರು ಮನವಿಯಲ್ಲಿ ಆಗ್ರಹಿಸಿದ್ದಾರೆ.
ಮನವಿಗೆ ಸ್ಪಂದಿಸಿದ ಪೌರಾಯುಕ್ತರು, ಡಿ.24ರಂದು ನಗರ ಸಭೆಯ ಸಾಮಾನ್ಯ ಸಭೆಯು ನಡೆಯಲಿದ್ದು, ಈ ಬಗ್ಗೆ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಮನವಿ ನೀಡಿದ ನಿಯೋಗದಲ್ಲಿ 34 ನೆಕ್ಕಿಲಾಡಿ ಗ್ರಾ.ಪಂ. ಅಧ್ಯಕ್ಷೆ ಸುಜಾತ ರೈ ಅಲಿಮಾರ್, ಉಪಾಧ್ಯಕ್ಷ ಹರೀಶ್ ಡಿ. ಸದಸ್ಯರಾದ ಪ್ರಶಾಂತ್ ಎನ್., ಗೀತಾ ವಾಸು ಗೌಡ ಉಪಸ್ಥಿತರಿದ್ದರು.