ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮಂಗಳೂರು ಪುತ್ತೂರಿನಿಂದ 8 ಮಂದಿ ಸದಸ್ಯರುಗಳ ಆಯ್ಕೆ

0

ಪುತ್ತೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮಂಗಳೂರು ಇದರ ನೂತನ ಸದಸ್ಯರುಗಳಾಗಿ 2024-2027ರ ಅವಧಿಗೆ ಪುತ್ತೂರಿನಿಂದ 8 ಮಂದಿ ಬಂಟ ಸಮಾಜದ ಪ್ರಮುಖರನ್ನು ಆಯ್ಕೆ ಮಾಡಲಾಗಿದೆ.

ಸದಸ್ಯರುಗಳಾಗಿ ಪುತ್ತೂರಿನಿಂದ ಆಯ್ಕೆಯಾದವರು: ಬಂಟರ ಯಾನೆ ನಾಡವರ ಮಾತೃ ಸಂಘದ ಉಪಾಧ್ಯಕ್ಷ ನೆಲೆಯಲ್ಲಿ ಪುತ್ತೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ನೆಲೆಯಲ್ಲಿ ಬಂಟರ ಸಂಘದ ಪುತ್ತೂರು ತಾಲೂಕು ಮಾಜಿ ಅಧ್ಯಕ್ಷ ಸವಣೂರು ಕೆ. ಸೀತಾರಾಮ ರೈ, ತಾಲೂಕು ಬಂಟರ ಸಂಘದ ನಿರ್ದೇಶಕ ದಂಬೆಕ್ಕಾನ ಸದಾಶಿವ ರೈ, ಬಂಟರ ಯಾನೆ ನಾಡವರ ಮಾತೃ ಸಂಘದ ಪುತ್ತೂರು ತಾಲೂಕು ಸಮಿತಿಯ ಸಂಚಾಲಕ ಕುಂಬ್ರ ದುರ್ಗಾಪ್ರಸಾದ್ ರೈ, ಸಹಸಂಚಾಲಕ ಸಾಜ ರಾಧಾಕೃಷ್ಣ ಆಳ್ವ, ನಿರ್ದೇಶಕ ಜಯಪ್ರಕಾಶ್ ರೈ ನೂಜಿಬೈಲು, ಬಂಟರ ಸಂಘದ ಪುತ್ತೂರು ತಾಲೂಕು ಪ್ರಧಾನ ಕಾರ‍್ಯದರ್ಶಿ ನಿತ್ಯಾನಂದ ಶೆಟ್ಟಿ ಮನವಳಿಕೆ ಹಾಗೂ ಬಂಟರ ಸಂಘ ಪುತ್ತೂರು ತಾಲೂಕು ಜೊತೆ ಕಾರ‍್ಯದರ್ಶಿ ಪುಲಸ್ಯ ರೈರವರುಗಳನ್ನು ಆಯ್ಕೆ ಮಾಡಲಾಗಿದೆ.

LEAVE A REPLY

Please enter your comment!
Please enter your name here