(ಡಿ.12) ನಾಳೆ ಬಡಗನ್ನೂರಿನಲ್ಲಿ ಉಚಿತ ಹುಚ್ಚುನಾಯಿ ರೋಗ ನಿರೋಧಕ ಲಸಿಕಾ ಶಿಬಿರ

0

ಬಡಗನ್ನೂರು: ದ.ಕ. ಜಿಲ್ಲಾ ಪಂಚಾಯತ್ ಮಂಗಳೂರು ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಪುತ್ತೂರು ಹಾಗೂ ಗ್ರಾಮ ಪಂಚಾಯತ್ ಬಡಗನ್ನೂರು ಇವರ ಸಂಯುಕ್ತ ಆಶ್ರಯದಲ್ಲಿ ನಾಯಿಗಳಿಗೆ ಉಚಿತ ಹುಚ್ಚುನಾಯಿ ರೋಗ ನಿರೋಧಕ ಲಸಿಕಾ ಶಿಬಿರವು ಡಿ.12ರಂದು  ಪೂರ್ವಾಹ್ನ ಗಂ 9-30ಕ್ಕೆ ಗ್ರಾ.ಪಂ. ಬಡಗನ್ನೂರು ಸಭಾಂಗಣದಲ್ಲಿ ಉದ್ಘಾಟನೆಗೊಳ್ಳಲಿದೆ.

ಬಳಿಕ 4 ತಂಡಗಳ ಮೂಲಕ ಗ್ರಾ.ಪಂ ವ್ಯಾಪ್ತಿಯ 20 ಕೇಂದ್ರಗಳಲ್ಲಿ ಮಧ್ಯಾಹ್ನ ಗಂ.1ರ ತನಕ ಲಸಿಕೆ ನೀಡುವ ಕಾರ್ಯಕ್ರಮ ನಡೆಯಲಿದೆ. ಗ್ರಾಮಸ್ಥರು ತಮ್ಮ ಸಾಕು ನಾಯಿಗಳನ್ನು ಸಮೀಪದ ಕೇಂದ್ರಕ್ಕೆ ತಂದು ಲಸಿಕೆ ಹಾಕಿಸಿಕೊಳ್ಳುವಂತೆ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here