ಪುತ್ತೂರು: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಇದರ ದರ್ಬೆ ಶಾಖೆ ವತಿಯಿಂದ ಕೆಮ್ಮಿಂಜೆ ಶ್ರೀ ಷಣ್ಮುಖ, ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಇ-ಹುಂಡಿಯನ್ನು ಹಸ್ತಾಂತರಿಸಲಾಯಿತು.
ದೇವಸ್ಥಾನದಲ್ಲಿ ಆಧುನಿಕ ಡಿಜಿಟಲ್ ಹುಂಡಿ ಸಂಗ್ರಹಣಾ ವ್ಯವಸ್ಥೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಕೈಗೊಂಡ ಈ ಕಾರ್ಯಕ್ರಮದಲ್ಲಿ ದೇವಸ್ಥಾನದ ಆಡಳಿತಾಧಿ ಸುಲೋಚನಾ ಪಿ.ಜೆ, ಉತ್ಸವ ಸಮಿತಿ ಅಧ್ಯಕ್ಷ ಕೇಶವ ಪೂಜಾರಿ ಬೆದ್ರಾಳ, ದರ್ಬೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯ ಪ್ರಬಂಧಕಿ ಅನುರಾಧ ಎಚ್.ಆರ್, ಯೂನಿಯನ್ ಬ್ಯಾಂಕ್ ಪ್ರಾದೇಶಿಕ ಕಛೇರಿ ಮಂಗಳೂರು ಇಲ್ಲಿನ ಗ್ರೇಸಿ ಲೋಬೊ, ಚೇತನ್ ಉಪಸ್ಥಿತರಿದ್ದರು.