ರಾಮಕುಂಜ: ರಾಮಕುಂಜ ಅಂಗನವಾಡಿ ಕೇಂದ್ರದಲ್ಲಿ ಡಿ.9ರಂದು ಬಾಲಮೇಳ ನಡೆಯಿತು.
ಬಾಲವಿಕಾಸ ಸಮಿತಿ ಅಧ್ಯಕ್ಷೆ ಪ್ರೇಮ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿದ್ದ ಶ್ರೀ ರಾಮಕುಂಜೇಶ್ವರ ಪ.ಪೂ.ಕಾಲೇಜಿನ ಪ್ರಾಂಶುಪಾಲ ಕೆ.ಚಂದ್ರಶೇಖರ ಅವರು ಮಕ್ಕಳ ಬೆಳವಣಿಗೆಯಲ್ಲಿ ಪೋಷಕರ ಪಾತ್ರದ ಬಗ್ಗೆ ಮಾಹಿತಿ ನೀಡಿದರು. ರಾಮಕುಂಜ ಗ್ರಾ.ಪಂ.ಅಧ್ಯಕ್ಷೆ ಸುಚೇತಾ, ಉಪಾಧ್ಯಕ್ಷ ಕೇಶವ್ ಗಾಂಧಿಪೇಟೆ, ರಾಮಕುಂಜ ಸರಕಾರಿ ಹಿ.ಪ್ರಾ.ಶಾಲಾ ಮುಖ್ಯಶಿಕ್ಷಕ ಮಹೇಶ್ ಅವರು ಸಂದರ್ಭೋಚಿತವಾಗಿ ಮಾತನಾಡಿದರು. ಅಂಗನವಾಡಿ ಮೇಲ್ವಿಚಾರಕಿ ಉಮಾವತಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಆರೋಗ್ಯ ಸಹಾಯಕಿ ಜಲಜಾ, ಆಶಾ ಕಾರ್ಯಕರ್ತೆಯರಾದ ಪ್ರಮೀಳಾ, ಪ್ರೇಮಾ ಉಪಸ್ಥಿತರಿದ್ದರು.
ಅಂಗನವಾಡಿ ಕಾರ್ಯಕರ್ತೆ ಯಮುನಾ ಸ್ವಾಗತಿಸಿ, ವಂದಿಸಿದರು. ಸಹಾಯಕಿ ಪ್ರವೀಣ ಸಹಕರಿಸಿದರು. ಅಂಗನವಾಡಿ ಮಕ್ಕಳು ಪ್ರಾರ್ಥಿಸಿದರು. ಮಕ್ಕಳ ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಲಘು ಉಪಾಹಾರ ಮತ್ತು ಬಹುಮಾನ ಪ್ರಾಯೋಜಕತ್ವವನ್ನು ಮಕ್ಕಳ ಪೋಷಕರ ಸಮಿತಿ ಸದಸ್ಯರು ನೀಡಿ ಸಹಕರಿಸಿದರು.