ಗೌರವಾಧ್ಯಕ್ಷ ಗಿರಿಶಂಕರ್ ಸುಲಾಯ, ಅಧ್ಯಕ್ಷ ಹರಿಪ್ರಸಾದ್ ಅಂಗಡಿಮೂಲೆ, ಉಪಾಧ್ಯಕ್ಷ ಕೀರ್ತನ್ ಕೋಡಿಬೈಲು, ಪ್ರಧಾನ ಕಾರ್ಯದರ್ಶಿ ರಾಜೇಶ್ ಇಡ್ಯಾಡಿ
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಡಿ.28,29 ರಂದು ನಡೆಯುವ ವೈಭವದ ಶ್ರೀನಿವಾಸ ಕಲ್ಯಾಣೋತ್ಸವದ ಸವಣೂರು ವಲಯ ಸಮಿತಿಯನ್ನು ಪುತ್ತಿಲ ಪರಿವಾರ ಟ್ರಸ್ಟ್ ನ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ರವರ ಅಧ್ಯಕ್ಷತೆಯಲ್ಲಿ ಡಿ.11ರಂದು ಸವಣೂರು ಯುವ ಸಭಾಭವನದಲ್ಲಿ ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಸಾಮಾಜಿಕ ಮುಂದಾಳು ಗಿರಿಶಂಕರ್ ಸುಲಾಯ ದೇವಸ್ಯ, ಅಧ್ಯಕ್ಷರಾಗಿ ಹರಿಪ್ರಸಾದ್ ಅಂಗಡಿಮೂಲೆ, ಉಪಾಧ್ಯಕ್ಷರಾಗಿ ಕೀರ್ತನ್ ಕೋಡಿಬೈಲು, ಪ್ರಧಾನ ಕಾರ್ಯದರ್ಶಿಯಾಗಿ ರಾಜೇಶ್ ಇಡ್ಯಾಡಿ, ಜೊತೆ ಕಾರ್ಯದರ್ಶಿಯಾಗಿ ಕೌಶಿಕ್ ಮಾಂತೂರು, ಕೋಶಾಧಿಕಾರಿಯಾಗಿ ದೇವಿಪ್ರಸಾದ್ ಪಂಚೋಡಿ ಅವರನ್ನು ಆಯ್ಕೆಮಾಡಲಾಯಿತು.