ಪುತ್ತೂರು: ಪುತ್ತೂರು ತಾಲೂಕಿನಲ್ಲಿ ವಿವಿಧ ಸಹಕಾರಿ ಬ್ಯಾಂಕ್‌ಗಳಿಗೆ ಚುನಾವಣೆ ನಡೆಯಲಿರುವ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ 7 ಮಂದಿ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ. ಶಾಸಕ ಅಶೋಕ್ ಕುಮಾರ್ ರೈಯವರ ಸೂಚನೆಯಂತೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಪ್ರಸಾದ್ ಆಳ್ವ ನೇಮಕಗೊಳಿಸಿದ್ದಾರೆ.
ಸಹಕಾರಿ ಯೂನಿಯನ್‌ನ ಜಿಲ್ಲಾಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ ಬೆಳ್ಳಿಪ್ಪಾಡಿ, ಕಾಂಗ್ರೆಸ್ ಸೇವಾ ದಳದ ಜಿಲ್ಲಾಧ್ಯಕ್ಷ ಜೋಕಿಂ ಡಿ’ ಸೋಜ, ಬ್ಲಾಕ್ ಕಾಂಗ್ರೆಸ್ ಸಹಕಾರಿ ಘಟಕದ ಅಧ್ಯಕ್ಷ ಪರಮೇಶ್ವರ ಭಂಡಾರಿ, ಕಿಸಾನ್ ಘಟಕದ ಜಿಲ್ಲಾ ಉಪಾಧ್ಯಕ್ಷ ಎ.ಕೆ ಜಯರಾಮ ರೈ, ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಆಲಿ, ಆರ್ಯಾಪು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಸುರೇಂದ್ರ ರೈ ಬಳ್ಳಮಜಲು, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಪಿ.ಜಿ ಭಟ್ ಪಾಣಾಜೆಯವರನ್ನು ನೇಮಕಗೊಳಿಸಲಾಗಿದೆ.