ಪುತ್ತೂರು, ಕಡಬ ತಾಲೂಕಿನ 20 ಸಹಕಾರ ಸಂಘಗಳ ಆಡಳಿತ ಮಂಡಳಿ ಚುನಾವಣೆಗೆ ದಿನಾಂಕ ನಿಗದಿ

0

ಪುತ್ತೂರು:2025ರ ಜನವರಿ ಹಾಗೂ ಫೆಬ್ರವರಿ ತಿಂಗಳಲ್ಲಿ, ಹಾಲಿ ಆಡಳಿತ ಮಂಡಳಿಯ ಅವಧಿ ಪೂರ್ಣಗೊಳ್ಳಲಿರುವ ಪ್ರಾಥಮಿಕ ಕೃಷಿಪತ್ತಿನ ಮತ್ತು ಹಾಲು ಉತ್ಪಾದಕರ ಸಹಕಾರ ಸಂಘಗಳ ಸಹಿತ ಪುತ್ತೂರು ಹಾಗೂ ಕಡಬ ತಾಲೂಕಿನ 20 ಸಹಕಾರ ಸಂಘಗಳಿಗೆ ನೂತನ ಆಡಳಿತ ಮಂಡಳಿ ನಿರ್ದೇಶಕರ ಆಯ್ಕೆಗಾಗಿ ಸಹಕಾರ ಇಲಾಖೆ ಚುನಾವಣೆಗೆ ದಿನಾಂಕ ನಿಗದಿಗೊಳಿಸಿ ಸಹಕಾರ ಸಂಘಗಳಿಗೆ ಪತ್ರ ಕಳುಹಿಸಿಕೊಟ್ಟಿದೆ.


ಪುತ್ತೂರು ತಾಲೂಕಿನ ಮುಂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಡಿ.29, ಕುಂಬ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಜ.1, ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಜ.5, ಬಲ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಜ.8, ಬನ್ನೂರು ರೈತರ ಸೇವಾ ಸಹಕಾರಿ ಸಂಘಕ್ಕೆ ಜ.25, ಇರ್ದೆ-ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಫೆ.16,ಪಾಣಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಫೆ.16, ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಫೆ.22ರಂದು ಹಾಗೂ ಮುಂಡೂರು ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಡಿ.27, ಹಿರೇಬಂಡಾಡಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಡಿ.15, ರಾಮನಗರ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಜ.17, ಗ್ಲೋರಿಯಾ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಫೆ.2, ಚುನಾವಣೆಗೆ ದಿನಾಂಕ ನಿಗದಿಪಡಿಸಲಾಗಿದೆ.


ಕಡಬ ತಾಲೂಕಿನ ಸುಬ್ರಹ್ಮಣ್ಯ ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಜ.11, ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಜ.19, ಯೇನೆಕಲ್ಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಜ.27, ಹೊಸ್ಮಠ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಫೆ.9,ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಫೆ.9, ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಮಾ.3ಕ್ಕೆ ಹಾಗೂ ಕುದ್ಮಾರು ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಚುನಾವಣೆಗೆ ದಿನಾಂಕ ನಿಗದಿಪಡಿಸಲಾಗಿದೆ.ಚುನಾವಣೆಗೆ ಸಂಬಂಧಿಸಿ ಆಯಾ ಸಹಕಾರ ಸಂಘಗಳೇ ವೇಳಾ ಪಟ್ಟಿಯನ್ನು ಪ್ರಕಟಪಡಿಸಲಿವೆ.

LEAVE A REPLY

Please enter your comment!
Please enter your name here