ಎಲ್‌ಪಿಸಿ ವಾರಂಟ್ ಆರೋಪಿ ಅಝರುದ್ದೀನ್ ಬಂಧನ

0

ಉಪ್ಪಿನಂಗಡಿ: ಹಳೆಯ ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡು ಎಲ್‌ಪಿಸಿ ವಾರಂಟ್ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.


ಮಂಗಳೂರಿನ ಕಣ್ಣೂರು ಗಾಣದಬೆಟ್ಟು ನಿವಾಸಿ ಅಝರುದ್ದೀನ್ ಬಂಧಿತ ಆರೋಪಿ. 2009ರಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪತಿ- ಪತ್ನಿ ಕಲಹದಲ್ಲಿ ಈತ ಆರೋಪಿಯಾಗಿದ್ದ. ಆದರೆ ಈತ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ನ್ಯಾಯಾಲಯ ಈತನ ಮೇಲೆ ಎಲ್‌ಪಿಸಿ ವಾರಂಟ್ ಜಾರಿಗೊಳಿಸಿತ್ತು. ಈತನ ಪತ್ತೆ ಕಾರ್ಯದಲ್ಲಿ ತೊಡಗಿದ್ದ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಈತನನ್ನು ಪುತ್ತೂರು ತಾಲೂಕಿನ ಕೆಯ್ಯೂರು ಎಂಬಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ನ್ಯಾಯಾಲಯ ಈತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಈತ ಮದುವೆಯಾಗಿ ಕೆಯ್ಯೂರಿನಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸ್ತವ್ಯವಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ ವಿಜಯಪ್ರಸಾದ್ ಅವರ ಮಾರ್ಗದರ್ಶನದಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಶಿವಕುಮಾರ್ ಹಾಗೂ ಪೊಲೀಸ್ ಉಪನಿರೀಕ್ಷಕರುಗಳಾದ ಹರೀಶ್, ಮೂರ್ತಿ, ಲೋಲಾಕ್ಷ ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಹರೀಶ್ಚಂದ್ರ, ಗಣೇಶ್ ಪ್ರಸಾದ್, ರಾಜೇಶ್ ಅವರ ತಂಡ ಈತನ ಪತ್ತೆ ಕಾರ್ಯದಲ್ಲಿ ಭಾಗವಹಿಸಿತು.

LEAVE A REPLY

Please enter your comment!
Please enter your name here