ನೆಲ್ಯಾಡಿ: ಇಚ್ಲಂಪಾಡಿ ಗ್ರಾಮದ ಕೊರಮೇರು ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಹಾಗೂ ಸ್ತ್ರೀ ಶಕ್ತಿ ಸಂಘದ ವಾರ್ಷಿಕೋತ್ಸವ ನಡೆಯಿತು.
ಬಾಲವಿಕಾಸ ಸಮಿತಿ ಅಧ್ಯಕ್ಷೆ ಚಂದ್ರಾವತಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನೆಲ್ಯಾಡಿ ವಲಯ ಮೇಲ್ವಿಚಾರಕಿ ಪುಷ್ಪಾವತಿ ಡಿ.ಎಂ.,ಅವರು ಶುಭಹಾರೈಸಿದರು. ಇಚ್ಲಂಪಾಡಿ ಗ್ರಾಮದ ಆರೋಗ್ಯ ಕಾರ್ಯಕರ್ತೆ ಶ್ಯಾಮಲ, ಆಶಾ ಕಾರ್ಯಕರ್ತೆ ಸಿನಿ, ನೇರ್ಲ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ತಂಗಮ್ಮ ವೇದಿಕೆಯಲ್ಲಿ ಉಪಸ್ಥಿರಿದ್ದರು.
ಕೊರಮೇರು ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಜೆಸ್ಸಿ ವರ್ಗೀಸ್ ಸ್ವಾಗತಿಸಿ, ದಿವ್ಯಾ ವಂದಿಸಿದರು. ಸುಜಾತ ಕಾರ್ಯಕ್ರಮ ನಿರೂಪಿಸಿದರು. ಅಂಗನವಾಡಿ ಮಕ್ಕಳಿಗೆ, ಪೋಷಕರಿಗೆ ಹಾಗೂ ಸ್ತ್ರೀ ಶಕ್ತಿ ಸಂಘದ ಸದಸ್ಯೆಯರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ನಡೆಸಿ ಬಹುಮಾನ ವಿತರಿಸಲಾಯಿತು. ಬಳಿಕ ಅಂಗನವಾಡಿ ಪುಟಾಣಿಗಳು, ಪೋಷಕರು ಹಾಗೂ ಸ್ತ್ರೀಶಕ್ತಿ ಸಂಘದ ಸದಸ್ಯೆಯರಿಂದ ವಿವಿಧ ಮನೋರಂಜನಾ ಕಾರ್ಯಕ್ರಮ ನಡೆಯಿತು.