ಕುರಿಯ ಉಳ್ಳಾಲ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ, ಆಮಂತ್ರಣ ಪತ್ರಿಕೆ ಬಿಡುಗಡೆ

0

ಪುತ್ತೂರು: ಕುರಿಯ ಗ್ರಾಮದ ಉಳ್ಳಾಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ 16 ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವವು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜ.4 ಮತ್ತು 5 ರಂದು ವಿಜೃಂಭಣೆಯಿಂದ ನಡೆಯಲಿದೆ.

ಪ್ರತಿಷ್ಠಾ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆಯನ್ನು ದೇವಳದ ವಠಾರದಲ್ಲಿ ದ.13 ರಂದು ಬಿಡುಗಡೆಗೊಳಿಸಲಾಯಿತು. ದೇವಳದ ಅರ್ಚಕ ಪ್ರಕಾಶ್ ಕುಮಾರ್‌ರವರು ಪೂಜಾ ವಿಧಿ ವಿಧಾನಗಳನ್ನು ನೆರವೇರಿಸುವ ಮೂಲಕ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ದೇವಳದ ಉತ್ಸವ ಸಮಿತಿಯ ಅಧ್ಯಕ್ಷರು, ಗೌರವ ಅಧ್ಯಕ್ಷರು, ಗೌರವ ಸಲಹೆಗಾರರು, ವಿವಿಧ ಸಮಿತಿಯ ಪದಾಧಿಕಾರಿಗಳು, ಸಂಚಾಲಕರು ಹಾಗೇ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷರುಗಳು, ಸದಸ್ಯರುಗಳು, ಭಕ್ತಾಧಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here