ಪುತ್ತೂರು:ವೀರಮಂಗಲದ ಆನಾಜೆ ಶ್ರೀ ಮಹಾವಿಷ್ಣು ಸೇವಾ ಪ್ರತಿಷ್ಠಾನದ ವತಿಯಿಂದ ಆನಾಜೆ ವೀರಮಂಗಲ ಸಾರ್ವಜನಿಕ ಶ್ರೀ ಮಹಾಲಿಂಗೇಶ್ವರ ಕಟ್ಟೆ ಸಮಿತಿಯ ಸಹಕಾರದೊಂದಿಗೆ 24ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮಗಳು ಡಿ.14ರಂದು ಸಂಜೆ ಆನಾಜೆ ವೀರಮಂಗಲ ಶ್ರೀ ಮಹಾಲಿಂಗೇಶ್ವರ ದೇವರ ಕಟ್ಟೆಯಲ್ಲಿ ನಡೆಯಲಿದೆ.
ಸಂಜೆ 5.30 ಗಂಟೆಯಿಂದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆಯು ಪ್ರಾರಂಭಗೊಳ್ಳಲಿದೆ. ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಅರ್ಚಕ ರಾಧಾಕೃಷ್ಣ ಶಗ್ರಿತ್ತಾಯರವರ ನೇತೃತ್ವದಲ್ಲಿ ಪೂಜಾ ಕಾರ್ಯಕ್ರಮಗಳು ನಡೆಯಲಿದೆ. ವೇ.ಮೂ ಶ್ರೀವತ್ಸ ಕೆದಿಲಾಯ ಶನಿಪೂಜೆಯ ಕಥಾ ಪ್ರವಚನ ನಡೆಸಿಕೊಡಲಿದ್ದಾರೆ. ರಾತ್ರಿ 7.30ಕ್ಕೆ ಮಹಾಪೂಜೆ ನಡೆಯಲಿದೆ.
ಬಳಿಕ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇದವಸ್ಥಾನ ಸೇವಾ ಟ್ರಸ್ಟ್‌ನ ಅಧ್ಯಕ್ಷ ಲಕ್ಷ್ಮೀಶ ತಂತ್ರಿಗಳು ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸ್ಕೃತ ಭಾರತಿ ಕಾಸರಗೋಡು ಇದರ ಜಿಲ್ಲಾ ಸಂಯೋಜಕ ಎಸ್.ಎಂ ಉಡುಪ ಕುಂಟಾರು ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಸಂಸದ ಕ್ಯಾ.ಬ್ರಿಜೇಶ್ ಚೌಟ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಶಿವನಾಥ ರೈ ಮೇಗಿನಗುತ್ತು, ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾ ಸಂಸ್ಥೆಗಳ ಮುಖ್ಯಗುರು ಜಯಮಾಲ ವಿ.ನ್ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಸಭಾ ಕಾರ್ಯಕ್ರಮದ ಬಳಿಕ ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ಬಳಿಕ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶ್ರೀಕೃಷ್ಣ ಕಲಾಕೇಂದ್ರ ವೀರಮಂಗಲ ಮತ್ತು ಭಕ್ತಕೋಡಿ ಇದರ ವಿದ್ಯಾರ್ಥಿಗಳಿಂದ ವಿದ್ವಾನ್ ಗೋಪಾಲಕೃಷ್ಣ ವೀರಮಂಗಲ ನಿರ್ದೇಶನದಲ್ಲಿ ತುಳು ಪಾಡ್ದನ ಆಧಾರಿತ ಭಕ್ತ ಪ್ರಧಾನ ತುಳು ನೃತ್ಯರೂಪಕ ‘ವರಾಹ ರೂಪ’ ಹಾಗೂ ಅಮ್ಮ ಕಲಾವಿದೆರ್ ಕುಡ್ಲ ಅಭಿನಯಿಸುವ ‘ಅಮ್ಮೆರ್’ ಎಂಬ ತುಳು ಹಾಸ್ಯಮಯ ನಾಟಕ ನಡೆಯಲಿದೆ ಎಂದು ಶ್ರೀ ಮಹಾವಿಷ್ಣು ಸೇವಾ ಪ್ರತಿಷ್ಠಾನದ ಅಧ್ಯಕ್ಷ ಗೋಪಾಲಕೃಷ್ಣ ವೀರಮಂಗಲ ಹಾಗೂ ಸಾರ್ವಜನಿಕ ಶ್ರೀ ಮಹಾಲಿಂಗೇಶ್ವರ ಕಟ್ಟೆಪೂಜೆ ಸಮಿತಿ ಅಧ್ಯಕ್ಷ ಬೆಳಿಯಪ್ಪ ಗೌಡ ವಿ.ಪೆಲತ್ತಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.