ಪುತ್ತೂರು : ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಇವರ ವತಿಯಿಂದ ನಡೆಸಲ್ಪಡುವ ಪುತ್ತೂರು ಶ್ರೀ ರಾಮಕೃಷ್ಣ ಪ್ರೌಢಶಾಲೆಯ ವಾರ್ಷಿಕೋತ್ಸವ ದ. 14 ರಂದು ಜರಗಲಿದೆ.
ಸಂಜೆ 4-೦೦ ಗಂಟೆಗೆ ಮಕ್ಕಳ ನೃತ್ಯೋತ್ಸವ ಸಾಂಸ್ಕೃತಿಕ ಕಾರ್‍ಯಕ್ರಮ ಆರಂಭವಾಗಲಿದ್ದು, ಸಂಜೆ 6-೦೦ ಗಂಟೆಗೆ ಸಭಾ ಕಾರ್ಯಕ್ರಮ ಜರಗಲಿದ್ದು, ಶಾಲಾ ಸಂಚಾಲಕ ಕಾವು ಹೇಮನಾಥ ಶೆಟ್ಟಿರವರು ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಕಾರ್‍ಯಕ್ರಮ ಉದ್ಘಾಟಿಸಲಿದ್ದಾರೆ. ಮುಖ್ಯ ಅಭ್ಯಾಗತರಾಗಿ ಪುತ್ತೂರು ಉಪವಿಭಾಗದ ಉಪಆಯುಕ್ತ ಜುಬಿನ್ ಮೊಹಪಾತ್ರ, ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್. ಬಂಟರ ಯಾನೆ ನಾಡವರ ಮಾತೃ ಸಂಘ ತಾಲೂಕು ಸಮಿತಿಯ ಸಂಚಾಲಕ ದುರ್ಗಾಪ್ರಸಾದ್ ರೈ ಕುಂಬ್ರ, ಶಾಲಾಹಿರಿಯ ವಿದ್ಯಾರ್ಥಿನಿ ಹಾಗೂ ಬ್ಯಾಂಕ್ ಆಪ್ ಬರೋಡ ಪುತ್ತೂರಿನ ಪ್ರಬಂಧಕರಾದ ಮಮತಾ, ದತ್ತಿನಿಧಿ ಪ್ರಾಯೋಜಕರಾದ ಮೂಕಾಂಬಿಕ ಗ್ಯಾಸ್ ಏಜೆನ್ಸಿಸ್ ಮಾಲಕ ಸಂಜೀವ ಆಳ್ವ ಹಾರಾಡಿ, ಶ್ರೀ ರಾಮಕೃಷ್ಣ ಪ್ರೌಢಶಾಲೆಯ ವಿಶ್ರಾಂತ ಮುಖ್ಯೋಪಾಧ್ಯಾಯ ಮನೋಹರ್ ರೈ, ಡಾ. ಬಿ. ನಳಿನಿ ರೈಯವರ ಪುತ್ರಿ ಪ್ರತಿಮಾ ಹೆಗ್ಡೆವರು ಭಾಗವಹಿಸಲಿದ್ದಾರೆ. ಸಂಜೆ ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆಯನ್ನು ಸಹಕಾರ ರತ್ನ ಪುರಸ್ಕೃತ ದಂಬೆಕಾನ ಸದಾಶಿವ ರೈ ನೆರವೇರಿಸಲಿದ್ದಾರೆ. ರಾತ್ರಿ ಗಂಟೆ 8-೦೦ರಿಂದ ಮಕ್ಕಳ ನೃತ್ಯೋತ್ಸವ, ಸಾಂಸ್ಕೃತಿಕ ಕಾರ್‍ಯಕ್ರಮ ಮುಂದುವರಿಯಲಿದೆ ಎಂದು ಶಾಲಾ ಮುಖ್ಯ ಶಿಕ್ಷಕಿ ಜಯಲಕ್ಷ್ಮೀ ತಿಳಿಸಿದ್ದಾರೆ.