ಪುತ್ತೂರು: ಶ್ರೀರಾಮ ಮಂದಿರ ಕೆದಂಬಾಡಿ ಸನ್ಯಾಸಿಗುಡ್ಡೆ ಇದರ ಪ್ರತಿಷ್ಠಾ ವಾರ್ಷಿಕ ಉತ್ಸವವು ದ.20ರಿಂದ 26 ರವರೆಗೆ ನಡೆಯಲಿದ್ದು, ಅದರ ಆಮಂತ್ರಣ ಪತ್ರವನ್ನು ಇತ್ತೀಚೆಗೆ ಕ್ಷೇತ್ರದಲ್ಲಿ ಬಿಡುಗಡೆಗೊಳಿಸಲಾಯಿತು.
ಆಡಳಿತ ಸಮಿತಿಯವರು, ಭಜನಾ ಸಮಿತಿಯವರು ಹಾಗೂ ಕೆದಂಬಾಡಿ ಯುವರಂಗದ ಪದಾಧಿಕಾರಿಗಳು, ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.