ವಿಟ್ಲ: ಬೆಂಗಳೂರಿನ ದಿ ತಾಜ್‌ನಲ್ಲಿ ಎಜುಕೇಶನ್ ಟುಡೇ ಆಯೋಜಿಸಿದ್ದ ಕೆ 12 ಲೀಡರ್‌ಶಿಪ್ ಮತ್ತು ಇಂಡಿಯಾ ಸ್ಕೂಲ್ ಮೆರಿಟ್ ಅವಾರ್ಡ್ಸ್ ಸಮಾರಂಭದಲ್ಲಿ ಮಂಗಳೂರಿನ ಶಕ್ತಿನಗರದಲ್ಲಿರುವ ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆ ಬಬಿತಾ ಸೂರಜ್ ಅವರು ಡೈನಾಮಿಕ್ ಸ್ಕೂಲ್ ಅವಾರ್ಡ್ -24 ಸ್ವೀಕರಿಸಿದರು.
ಶಕ್ತಿ ವಸತಿ ಶಾಲೆಯ ಸಮಗ್ರ ಅಭಿವೃದ್ಧಿಯಲ್ಲಿನ ಶ್ರೇಷ್ಠತೆಗಾಗಿ ಕೆ.12 ಲೀಡರ್ ಶಿಪ್ ಮತ್ತು ಇಂಡಿಯಾ ಸ್ಕೂಲ್ ಮೆರಿಟ್ ಅವಾರ್ಡ್ಸ್ನ 12ನೇ ರಾಷ್ಟ್ರೀಯ ಸಮ್ಮೇಳನದಲ್ಲಿ ಡೈನಾಮಿಕ್ ಸ್ಕೂಲ್ ಅವಾರ್ಡ್ 2024 ಪ್ರತಿಷ್ಠಿತ ಮಾನ್ಯತೆ ದೊರೆತಿದೆ.
ಸಮ್ಮೇಳನದಲ್ಲಿ ಭಾರತಾದ್ಯಂತ ಮುನ್ನೂರಕ್ಕೂ ಹೆಚ್ಚು ಪ್ರಾಂಶುಪಾಲರು ಹಾಗೂ ಶಿಕ್ಷಣ ತಜ್ಞರು ಭಾಗವಹಿಸಿದ್ದರು. ಬಬಿತಾ ಸೂರಜ್ ಪ್ಯಾನೆಲ್ ಚರ್ಚೆಗಳಲ್ಲಿ ಭಾಗವಹಿಸಿದ್ದರು ಎಂದು ಸಂಸ್ಥೆಯ ಸಂಸ್ಥಾಪಕ ಡಾ.ಕೆ.ಸಿ.ನಾಯ್ಕ್, ಕಾರ್ಯದರ್ಶಿ ಸಂಜಿತ್ ಸಂಜಿತ್ ನಾಯ್ಕ್, ಪ್ರಧಾನ ಸಲಹೆಗಾರ ರಮೇಶ್ ಕೆ., ಶಕ್ತಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವೆಂಕಟೇಶ ಮೂರ್ತಿ ಎಚ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.