ಪುತ್ತೂರು: ಗ್ರಾಮದ ಅಭಿವೃದ್ಧಿ ಯೋಜನೆಗಳ ಜಾರಿಯಲ್ಲಿ ಹೆಚ್ಚಿನ ಪಾರದರ್ಶಕತೆಯನ್ನು ತರುವ ಉದ್ದೇಶದಿಂದ ಒಳಮೊಗ್ರು ಗ್ರಾಮ ಪಂಚಾಯತಿಗೆ ಸಂಬಂಧಿಸಿದ 2023-24ನೇ ಸಾಲಿನ ಜಮಾಬಂದಿ ಸಭೆಯು ಡಿ.16ರಂದು ಪೂರ್ವಾಹ್ನ ಗ್ರಾಮ ಪಂಚಾಯತ್ ಕಛೇರಿ ಸಭಾಂಗಣದಲ್ಲಿ ನಡೆಯಲಿದೆ.
ತಾಲೂಕು ಪಂಚಾಯತ್ ನರೇಗಾ ಸಹಾಯಕ ನಿರ್ದೇಶಕರಾದ ಶೈಲಜ ಭಟ್‌ರವರು ನೋಡೆಲ್ ಅಧಿಕಾರಿಯಾಗಿ ಜಮಾಬಂದಿ ನಡೆಸಿಕೊಡಲಿರುವರು. ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು, ಉಪಾಧ್ಯಕ್ಷ ಅಶ್ರಫ್ ಉಜಿರೋಡಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮನ್ಮಥ ಅಜಿರಂಗಳ, ಕಾರ್ಯದರ್ಶಿ ಜಯಂತಿ ಹಾಗೂ ಸರ್ವ ಸದಸ್ಯರು ಮತ್ತು ಸಿಬ್ಬಂದಿ ವರ್ಗದ ಪ್ರಕಟಣೆ ತಿಳಿಸಿದೆ.