ಕಡಬ: ‘ಜೈ ಶ್ರೀರಾಮ್’ ಘೋಷಣೆ- ಎಫ್‌ಐಆರ್ ರದ್ದು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ

0

ಕಡಬ: ಕಡಬದ ಮಸೀದಿ ಆವರಣದಲ್ಲಿ ‘ಜೈ ಶ್ರೀರಾಮ್’ ಘೋಷಣೆ ಕೂಗಿದ್ದಕ್ಕಾಗಿ ಇಬ್ಬರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ 2024ರ ಸೆಪ್ಟೆಂಬರ್ 13ರ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲಾಗಿದೆ.


ಹೈಕೋರ್ಟ್ ಏಕಸದಸ್ಯ ಪೀಠದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಪ್ರಕರಣವನ್ನು ರದ್ದುಗೊಳಿಸುವ ವೇಳೆ “ಯಾರಾದರೂ ಜೈ ಶ್ರೀರಾಮ್ ಎಂದು ಕೂಗಿದರೆ ಅದು ಯಾವುದೇ ವರ್ಗದ ಧಾರ್ಮಿಕ ಭಾವನೆಯನ್ನು ಹೇಗೆ ಕೆರಳಿಸುತ್ತದೆ ಎಂಬುದು ಅರ್ಥವಾಗುತ್ತಿಲ್ಲ. ಆ ಪ್ರದೇಶದಲ್ಲಿ ಹಿಂದೂ-ಮುಸ್ಲಿಮರು ಸಾಮರಸ್ಯದಿಂದ ವಾಸಿಸುತ್ತಿದ್ದಾರೆ ಎಂದು ದೂರುದಾರರೇ ಹೇಳಿದ್ದಾರೆ” ಎಂದು ಹೇಳಿದ್ದರು.


2023 ರ ಸೆಪ್ಟೆಂಬರ್ 25 ರಂದು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಪೊಲೀಸ್ ಠಾಣೆಗೆ ಹೈದರ್ ಅಲಿ ಸಿಎಂ ಅವರು ಸಲ್ಲಿಸಿದ ದೂರಿನ ಮೇರೆಗೆ ಕೀರ್ತನ್ ಕುಮಾರ್ ಮತ್ತು ಸಚಿನ್ ಕುಮಾರ್ ಎನ್ ಎಂ ವಿರುದ್ಧ ಎಫ್ಐಆರ್ ದಾಖಲಾಗಿತ್ತು.


ಆ ದೂರಿನ ಅನ್ವಯ ಆರೋಪಿಗಳಿಬ್ಬರ ವಿರುದ್ಧ ಸೆಕ್ಷನ್ 447 (ಕ್ರಿಮಿನಲ್ ಅತಿಕ್ರಮಣಕ್ಕೆ ಶಿಕ್ಷೆ), 505 (ಸಾರ್ವಜನಿಕ ಕಿರುಕುಳಕ್ಕೆ ಕಾರಣವಾಗುವ ಹೇಳಿಕೆಗಳು), 506 (ಕ್ರಿಮಿನಲ್ ಬೆದರಿಕೆಗೆ ಶಿಕ್ಷೆ), 34 (ಸಾಮಾನ್ಯ ಉದ್ದೇಶ) ಮತ್ತು 295 ‘ಎ’ ಸೇರಿ ವಿವಿಧ ಐಪಿಸಿ ಅಪರಾಧಗಳಡಿ ಪ್ರಕರಣ ದಾಖಲಿಸಲಾಗಿತ್ತು. ಅದನ್ನು ರದ್ದು ಕೋರಿ ಅರ್ಜಿದಾರರು ರಾಜ್ಯ ಹೈಕೋರ್ಟ್ ಮೆಟ್ಟಿಲೇರಿದ್ದರು.

LEAVE A REPLY

Please enter your comment!
Please enter your name here