ಬೆಟ್ಟಂಪಾಡಿ: ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧರ್ನುಮಾಸದ ಪ್ರಯುಕ್ತ ವಿಶೇಷ ‘ಧನುಪೂಜೆ’ ಯು ದ. 16 ರಿಂದ ಆರಂಭಗೊಂಡು ಜ. 14 ರವರೆಗೆ ನಡೆಯಲಿದೆ.
ಪ್ರತಿದಿನ ಬೆಳಿಗ್ಗೆ ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ಪೂಜೆಯ ಬಳಿಕ ಫಲಾಹಾರದ ವ್ಯವಸ್ಥೆಯಿರುತ್ತದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ಅನುವಂಶಿಕ ಆಡಳಿತ ಮೊಕ್ತೇಸರ ವಿನೋದ್ ಕುಮಾರ್ ಬಲ್ಲಾಳ್ ತಿಳಿಸಿರುತ್ತಾರೆ.