ಪುತ್ತೂರು ನ್ಯಾಯಾಲಯದಲ್ಲಿ ಮೆಗಾ ಲೋಕ ಅದಾಲತ್ – 260 ಪ್ರಕರಣ ಇತ್ಯರ್ಥ – 2.61 ಕೋಟಿ ಪರಿಹಾರ ವಿತರಣೆಗೆ ಆದೇಶ

0

ಲೋಕ ಅದಾಲತ್‌ನಲ್ಲಿ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ವ್ಯಾಜ್ಯಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಗೊಳಿಸುವ, ಚೆಕ್ ಬೌನ್ಸ್, ವಿಮಾ ಹಣದ ಪ್ರಕರಣ, ಬ್ಯಾಂಕ್ ಹಾಗೂ ಇತರ ಕಂಪನಿಗಳೊಂದಿಗೆ ಇರುವ ವ್ಯಾಜ್ಯಗಳಲ್ಲಿ ಕಕ್ಷಿದಾರರು ಒಪ್ಪುವ ರೀತಿಯಲ್ಲಿ ಇತ್ಯರ್ಥ ಮಾಡುವ ಪ್ರಯತ್ನ ನಡೆದು ಒಟ್ಟು 638 ಪ್ರಕರಣಗಳಲ್ಲಿ 260 ಪ್ರಕರಣಗಳನ್ನು ರಾಜಿ ಇತ್ಯರ್ಥ ಪಡಿಸಲಾಯಿತು.


ಪುತ್ತೂರು: ನ್ಯಾಯಾಲಯದಲ್ಲಿ ದಾಖಲಾಗಿರುವ ಮತ್ತು ನ್ಯಾಯಾಲಯಕ್ಕೆ ದಾಖಲಾಗದೇ ಇರುವ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಿಕೊಳ್ಳಲು ಡಿ.೧೪ ರಂದು ಪುತ್ತೂರಿನ ನ್ಯಾಯಾಲಯದಲ್ಲಿ ಮೆಗಾ ಲೋಕ ಅದಾಲತ್ ನಡೆಯಿತು.ಒಟ್ಟು 638 ಪ್ರಕರಣಗಳ ಪೈಕಿ 260 ಪ್ರಕರಣಗಳನ್ನು ಅದಾಲತ್‌ನಲ್ಲಿ ರಾಜಿಯಲ್ಲಿ ಇತ್ಯರ್ಥಗೊಳಿಸಿ, ಫಲಾನುಭವಿಗಳಿಗೆ ರೂ.2,61,21,518 ಪರಿಹಾರ ಮೊತ್ತವನ್ನು ವಿತರಿಸಲು ಆದೇಶಿಸಲಾಗಿದೆ.


ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ವ್ಯಾಜ್ಯಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಗೊಳಿಸುವ, ಜನನ ಮರಣ ನೋಂದಾವಣೆ, ಚೆಕ್ ಅಮಾನ್ಯ, ವಿಮಾ ಹಣದ ಪ್ರಕರಣ, ಬ್ಯಾಂಕ್ ಹಾಗೂ ಇತರ ಕಂಪನಿಗಳೊಂದಿಗೆ ಇರುವ ವ್ಯಾಜ್ಯಗಳಲ್ಲಿ ಕಕ್ಷಿದಾರರು ಒಪ್ಪುವ ರೀತಿಯಲ್ಲಿ ಇತ್ಯರ್ಥ ಮಾಡುವ ಪ್ರಯತ್ನ ನಡೆಯಿತು.


ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಸರಿತಾ ಡಿ ಅವರ ನ್ಯಾಯಾಲಯದಲ್ಲಿ 41 ಪ್ರಕರಣಗಳಲ್ಲಿ 12 ಇತ್ಯರ್ಥಗೊಂಡಿದ್ದು ರೂ.34,15,೦೦೦ ಪರಿಹಾರ ವಿತರಣೆಗೆ ಆದೇಶ ಆಗಿದೆ.ಪುತ್ತೂರು ಪ್ರಧಾನ ಹಿರಿಯ ವ್ಯವಹಾರಿಕ ನ್ಯಾಯಾಽಶೆ ಮತ್ತು ಹೆಚ್ಚುವರಿ ಮುಖ್ಯ ನ್ಯಾಯಿಕ ದಂಡಾಧಿಕಾರಿ ಪ್ರಿಯ ರವಿ ಜೊಗಲೇಕರ್ ಅವರ ನ್ಯಾಯಾಲಯದಲ್ಲಿ 257 ಪ್ರಕರಣಗಳಲ್ಲಿ 186 ಇತ್ಯರ್ಥಗೊಂಡಿದ್ದು ರೂ.72,51,430 ಪರಿಹಾರ ವಿತರಣೆಗೆ ಆದೇಶ ಆಗಿದೆ.ಅಪರ ಹಿರಿಯ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶೆ ಮತ್ತು ಜೆಎಮ್‌ಎಫ್ ಸಿಯೂ ಆಗಿರುವ ದೇವರಾಜ್ ವೈ.ಹೆಚ್ ಅವರ ನ್ಯಾಯಾಲಯದಲ್ಲಿ 84 ಪ್ರಕರಣಗಳಲ್ಲಿ 24 ಪ್ರಕರಣ ಇತ್ಯರ್ಥಗೊಂಡಿದ್ದು, ರೂ.92,95,೦೦೦ ವಿತರಣೆಗೆ ಆದೇಶ ಆಗಿದೆ.


ಪ್ರಧಾನ ಸಿವಿಲ್ ನ್ಯಾಯಾಲಯ, ಜೆಎಮ್‌ಎಫ್ ಸಿ ನ್ಯಾಯಾಧೀಶೆ ಅರ್ಚನಾ ಕೆ ಉನ್ನಿತಾನ್ ಅವರ ನ್ಯಾಯಾಲಯದಲ್ಲಿ 256 ಪ್ರಕರಣಗಳಲ್ಲಿ 38 ಪ್ರಕರಣಗಳು ಇತ್ಯರ್ಥಗೊಂಡಿದ್ದು ರೂ.61,60,೦88 ವಿತರಣೆಗೆ ಆದೇಶ ಆಗಿದೆ.ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಮತ್ತು ಜೆಎಮ್‌ಎಫ್ ಸಿ ಶಿವಣ್ಣ ಹೆಚ್.ಆರ್ ಅವರ ನ್ಯಾಯಾಲಯದಲ್ಲಿ 186 ಪ್ರಕರಣಗಳಲ್ಲಿ 22 ಇತ್ಯರ್ಥಗೊಂಡಿದ್ದು, ರೂ.2,೦೦,302 ವಿತರಣೆಗೆ ಆದೇಶ ಆಗಿದೆ. 2ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಮತ್ತು ಜೆಎಮ್‌ಎಫ್ ಸಿ ಯೋಗೇಂದ್ರ ಶೆಟ್ಟಿ ಅವರ ನ್ಯಾಯಾಲಯದಲ್ಲಿ 180 ಪ್ರಕರಣಗಳಲ್ಲಿ 129 ಪ್ರಕರಣ ಇತ್ಯರ್ಥಗೊಂಡಿದ್ದು, ರೂ.10,35,171 ವಿತರಣೆಗೆ ಆದೇಶ ಆಗಿದೆ.‌


ಪ್ರಕರಣಗಳ ಇತ್ಯರ್ಥಕ್ಕೆ ಸಂಧಾನಕಾರರಾಗಿ ನ್ಯಾಯವಾದಿಗಳಾದ ಅರ್ಪಿತಾ, ರಮ್ಲತ್ ಎಮ್, ಕಾರ್ತಿಕ್ ಬಿ.ಎಸ್, ಶಾಕೀರ್, ಅನೀಶ್ ಪಿ, ಭುವನ ಅವರು ಸಹಕರಿಸಿದರು.‌ ಸದ್ರಿ ವ್ಯಾಜ್ಯಗಳಲ್ಲಿ ಸಂಧಾನಕಾರ ವಕೀಲರನ್ನು ವಕೀಲರ ಸಂಘದ ಅಧ್ಯಕ್ಷ ಜಗನ್ನಾಥ ರೈ ಅವರು ನೇಮಕ ಮಾಡಿದ್ದರು.

LEAVE A REPLY

Please enter your comment!
Please enter your name here