ಮಾಡನ್ನೂರು: ಕಾವು-ಪುತ್ತೂರು ತೆರಳುವ ರಸ್ತೆ ಬದಿಯಲ್ಲಿ ಬಸ್ ತಂಗುದಾಣ ನಿರ್ಮಿಸುವಂತೆ ಸಾರ್ವಜನಿಕರ ಆಗ್ರಹ

0

ಪುತ್ತೂರು: ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಬಳಿಯ ಮಾಡನ್ನೂರು ಕಾವು ಜಂಕ್ಷನ್ ನಲ್ಲಿ ಕಾವುವಿನಿಂದ ಪುತ್ತೂರು ತೆರಳುವ ರಸ್ತೆಯ ಬದಿಯಲ್ಲಿ ಬಸ್ ತಂಗುದಾಣವನ್ನು ನಿರ್ಮಿಸುವಂತೆ ಸಾರ್ವಜನಿಕರ ಆಗ್ರಹವಾಗಿದೆ.

ಅರಿಯಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಎಲ್ಲಾ ಕಡೆಗಳಲ್ಲಿ ಬಸ್ ತಂಗುದಾಣ ನಿರ್ಮಾಣವಾಗಿದ್ದು, ಆದರೇ, ಕಾವು ರಸ್ತೆಯ ಬದಿಯಲ್ಲಿ ಬಸ್ ತಂಗುದಾಣ ನಿರ್ಮಾಣವಾಗಿಲ್ಲವೆಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಬೇಸಿಗೆ ಕಾಲದಲ್ಲಿ ಹಾಗೂ ಮಳೆಗಾಲದಲ್ಲಿ ಬಸ್ ತಂಗುದಾಣವಿಲ್ಲದೆ ಸಾರ್ವಜನಿಕರು ಸಂಕಷ್ಟ ಅನುಭವಿಸುವಂತಾಗಿದ್ದು, ಈ ಬಗ್ಗೆ ಪುತ್ತೂರಿನ ಶಾಸಕರು ಗಮನಹರಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here