ಪುತ್ತೂರು: ಪುತ್ತೂರು ಬೈಪಾಸ್ ರಸ್ತೆ ದರ್ಬೆ ವೃತ್ತದ ಬಳಿ ಬಾರ್ ಆ್ಯಂಡ್ ರೆಸ್ಟೋರೆಂಟ್ ಸಿಬ್ಬಂದಿಯೊಬ್ಬರಿಗೆ ವ್ಯಕ್ತಿಯೊಬ್ಬರು ಹಲ್ಲೆ ನಡೆಸಿದ ಘಟನೆ ಡಿ.14 ರ ರಾತ್ರಿ ನಡೆದಿದೆ.
ಬಾರ್ ಆ್ಯಂಡ್ ರೆಸ್ಟೋರೆಂಟ್ ಸಿಬ್ಬಂದಿ ಜಗದೀಶ್ ರೈ ಅವರು ಕರ್ತವ್ಯ ಮುಗಿಸಿ ಮನೆಗೆ ಹೋಗುತ್ತಿದ್ದ ವೇಳೆ ರಾಜಾರಾಮ್ ಭಟ್ ಮತ್ತು ಅವರ ತಂಡದವರು ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ.
ಹಲ್ಲೆಗೊಳಗಾದ ಜಗದೀಶ್ ರೈ ಅವರು ಮಹಾವೀರ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.