ಬ್ರಹ್ಮಕಲಶೋತ್ಸವಕ್ಕೆ ಅಣಿಗೊಳ್ಳುತ್ತಿದೆ ಪದಾಳ ಕ್ಷೇತ್ರ:ಕರಸೇವೆಯ ಮೂಲಕ ಪುಣ್ಯ ಕಾರ್ಯದಲ್ಲಿ ಭಾಗಿಗಳಾಗುತ್ತಿರುವ ಭಕ್ತರು

0

ಉಪ್ಪಿನಂಗಡಿ: ಇಲ್ಲಿನ ಪದಾಳ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿ.18ರಿಂದ ಡಿ.23ರ ವರೆಗೆ ಅಷ್ಟಬಂಧ ಬ್ರಹ್ಮಕಲಶೋತ್ಸವವು ನಡೆಯಲಿದ್ದು, ಇದರ ಪೂರ್ವಭಾವಿ ಕೆಲಸಗಳು ಭರದಿಂದ ನಡೆಯುತ್ತಿದ್ದು, ನೂರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಕರಸೇವೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಈ ಪುಣ್ಯ ಕಾರ್ಯದಲ್ಲಿ ಭಾಗಿಗಳಾಗುತ್ತಿದ್ದಾರೆ.


ಪದಾಳ ದೇವಾಲಯಕ್ಕೆ ಬರುವ ರಾಜ್ಯ ಹೆದ್ದಾರಿ ಹಾಗೂ ದೇವಾಲಯದ ರಾಜಬೀದಿ ಕೇಸರಿಮಯಗೊಂಡಿದ್ದು, ವಿದ್ಯುತ್ ದೀಪಾಲಂಕೃತದಿಂದ ಝಗಮಗಿಸುತ್ತಿದೆ. ಅಲ್ಲಲ್ಲಿ ದ್ವಾರಗಳನ್ನು ನಿರ್ಮಿಸಲಾಗಿದ್ದು, ರಸ್ತೆ ಬದಿಯಲ್ಲೆಲ್ಲಾ ಫ್ಲೆಕ್ಸ್‌ಗಳನ್ನು ಹಾಕಲಾಗಿದೆ. ದೇವಾಲಯದಲ್ಲಿಯೂ ಕೂಡಾ ಎಲ್ಲಾ ಕೆಲಸ ಕಾರ್ಯಗಳಲ್ಲಿ ವೃದ್ಧರಿಂದ ಹಿಡಿದು ಮಕ್ಕಳವರೆಗೆ ಭಕ್ತಾದಿಗಳು ಕರಸೇವೆಯಲ್ಲಿ ಭಾಗವಹಿಸುತ್ತಿದ್ದು, ತಮ್ಮಿಂದಾದ ಅಳಿಲ ಸೇವೆಯನ್ನು ಮಾಡುತ್ತಿದ್ದಾರೆ. ಪ್ರತಿ ಭಾನುವಾರ ಹಾಗೂ ಪ್ರತಿದಿನ ರಾತ್ರಿ ಏಳರಿಂದ ತಡರಾತ್ರಿಯವರೆಗೂ ಕರಸೇವಕರು ಶ್ರಮದಾನದ ಮೂಲಕ ವಿವಿಧ ಕೆಲಸ ಕಾರ್ಯಗಳನ್ನು ನಡೆಸುತ್ತಿದ್ದಾರೆ.


LEAVE A REPLY

Please enter your comment!
Please enter your name here