ರಾಮಕುಂಜ: ಸುಳ್ಯ ತಾಲೂಕಿನ ಕೊಡಿಯಾಲ ಕಲ್ಪಡದ ನಮ್ಮೂರ ನಮ್ಮ ಕನಸು ಜನಸೇವಾ ಟ್ರಸ್ಟ್ ಆಶ್ರಯದಲ್ಲಿ ದ.ಕ ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಷನ್ ಹಾಗೂ ಸುಳ್ಯ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಷನ್ ಇವರ ಸಹಭಾಗಿತ್ವದಲ್ಲಿ ಶ್ರೀ ಕಾಣಿಯೂರು ರಾಮತೀರ್ಥ ಮಠದ ಸಹಕಾರದೊಂದಿಗೆ ಡಿ.14ರಂದು ಕಾಣಿಯೂರಿನಲ್ಲಿ ನಡೆದ ಅಂತರ್ ಜಿಲ್ಲಾ ಪ್ರೌಢಶಾಲಾ ಬಾಲಕ-ಬಾಲಕಿಯರ ಮ್ಯಾಟ್ ಅಂಕಣದ ಕಬಡ್ಡಿ ಪಂದ್ಯಾಟದಲ್ಲಿ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ಬಾಲಕರ ಮತ್ತು ಬಾಲಕಿಯರ ತಂಡವು ಪ್ರಥಮ ಸ್ಥಾನ ಪಡೆದುಕೊಂಡಿದೆ.
ಬಾಲಕರ ವಿಭಾಗದಲ್ಲಿ ಅಭಿಷೇಕ್ ಹೊಸಮನಿ ಬೆಸ್ಟ್ ರೈಡರ್ ಹಾಗೂ ಬಾಲಕಿಯರ ವಿಭಾಗದಲ್ಲಿ ಧನ್ವಿ ಎಂ ಬೆಸ್ಟ್ ಆಲ್ ರೌಂಡರ್ ಪ್ರಶಸ್ತಿ ಪಡೆದುಕೊಂಡರು. ವಿದ್ಯಾರ್ಥಿಗಳಿಗೆ ಮಾಧವ ಬಿ.ಕೆ., ಜಸ್ವಂತ್ ಹಾಗೂ ಮಂಜುನಾಥ್ ತರಬೇತಿ ನೀಡಿದ್ದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಪ್ರಫುಲ್ಲಾ ರೈ ಅವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದರು. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಮುಖ್ಯಗುರು ಸತೀಶ್ ಭಟ್, ಶಾಲಾ ಶಿಕ್ಷಕ ವೃಂದವರು, ಆಡಳಿತ ಮಂಡಳಿಯವರು, ಶಾಲಾ-ಪೋಷಕರು, ಹಿರಿಯ ವಿದ್ಯಾರ್ಥಿಗಳು ಸಹಕರಿಸಿದ್ದರು.