ಪುತ್ತೂರು: ಭಾರತೀಯ ಸಂಸ್ಕೃತಿ ಮತ್ತು ಆಧ್ಯಾತ್ಮಿಕ ಪರಂಪರೆಯನ್ನು ಒಳಗೊಂಡ ಆಧುನಿಕ ಶಿಕ್ಷಣ ಸೌಲಭ್ಯವನ್ನು ಒದಗಿಸುವುದು ಈ ಸಂಸ್ಥೆಯ ಉದ್ದೇಶ.ಆಧುನಿಕ ಹಾಗೂ ಸ್ಪರ್ಧಾತ್ಮಕ ಜಗತ್ತಿಗೆ ವಿದ್ಯಾರ್ಥಿಗಳನ್ನು ಅಣಿಗೊಳಿಸಿಕೊಳ್ಳಲು ಶಿಕ್ಷಣ ಕ್ಷೇತ್ರದಲ್ಲಿ ಅಪರಿಮಿತ ಅವಕಾಶಗಳಿದ್ದು ಅವುಗಳನ್ನು ಸಮರ್ಪಕವಾಗಿ ಬಳಸಿಕೊಂಡು ವಿದ್ಯಾರ್ಥಿಗಳು ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕು.ಸಮಾಜದ ಆಸ್ತಿಗಳಾಗಿ ಹೊರಹೊಮ್ಮಬೇಕಾಗಿದೆ ಎಂದು ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ‍್ಯದರ್ಶಿಗಳಾದ ಡಾ. ಕೆ. ಎಂ. ಕೃಷ್ಣ ಭಟ್ ರವರು ಹೇಳಿದರು.
ಪುತ್ತೂರಿನ ತೆಂಕಿಲದಲ್ಲಿರುವ ನರೇಂದ್ರ ಪ.ಪೂ.ಕಾಲೇಜಿನ ನೂತನ ಸಭಾಂಗಣ ಹಂಸಧ್ವನಿ ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿದ್ದ ಖ್ಯಾತ ಚಲನಚಿತ್ರ ನಟಿ ಭವ್ಯಶ್ರೀ ಪೂಜಾರಿಯವರು ಕಾಲೇಜಿನ ವಾರ್ಷಿಕೋತ್ಸವದ ಸಾಂಸ್ಕೃತಿಕ ಕಾರ‍್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳು ಶಿಕ್ಷಣ, ಸಾಂಸ್ಕೃತಿಕ, ಕ್ರೀಡೆಯಂತಹ ಹಲವಾರು ಕ್ಷೇತ್ರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಾಗ ಮಾತ್ರ ವಿದ್ಯಾರ್ಥಿ ಜೀವನಕ್ಕೆ ಮೆರುಗು ಬರುವಂತಹದ್ದು. ಈ ನಿಟ್ಟಿನಲ್ಲಿ ಕಾಲೇಜು ವಾರ್ಷಿಕೋತ್ಸವದಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಅಡಕವಾಗಿರುವ ಪ್ರತಿಭೆಯ ಅನಾವರಣಕ್ಕೆ ವೇದಿಕೆಯಾಗುತ್ತದೆ. ಒದಗಿ ಬರುವ ಅವಕಾಶಗಳನ್ನು ಕೈಬಿಡಬಾರದು. ಜೀವನದಲ್ಲಿ ಗುರಿ ಸರಿದಾರಿಯಲ್ಲಿ ಸಾಗಿದಾಗ ಬದುಕಿಗೆ ಅರ್ಥ ಬರುತ್ತದೆ. ಯಾವ ಕೆಲಸವನ್ನು ಮಾಡಿದರೂ ಅದಕ್ಕೆ ಪ್ರಯತ್ನ ಮತ್ತು ಆತ್ಮವಿಶ್ವಾಸ ಮುಖ್ಯ. ಆಗ ಮಾತ್ರ ಯಶಸ್ಸು ಲಭಿಸುತ್ತದೆ.ಪ್ರತಿಯೊಬ್ಬರು ಸುಂದರ ಭವಿಷ್ಯದ ಕನಸು ಕಾಣಬೇಕು. ಕನಸಿನ ಸಾಕಾರತೆಗೆ ಪ್ರಯತ್ನವು ಅತ್ಯವಶ್ಯ ಎಂದು ಹೇಳಿದರು.
ಇನ್ನೋರ್ವ ಮುಖ್ಯ ಅತಿಥಿಗಳಾಗಿದ್ದ ಕಾಕುಂಜೆ ಗ್ರೂಪ್ ಆಫ್ ಕಂಪನೀಸ್ ಇದರ ನಿರ್ದೇಶಕರಾದ ಮಿಥುನ್ ಭಟ್ ಕಾಕುಂಜೆ ಅವರು ಮಾತನಾಡುತ್ತಾ ಇಂದಿನ ಆಧುನಿಕ ಯುಗದಲ್ಲಿ ಐಕ್ಯತೆ,ಸಾಮರಸ್ಯದ ಬದುಕು ಸಾಗಿಸುವ ಮೂಲಕ ಭವ್ಯ,ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಮುಂದಾಗಬೇಕು.ಭಾರತದ ಉನ್ನತ ಭವಿಷ್ಯಕ್ಕೆ ಹೊಸ ಹೊಸ ಆವಿಷ್ಕಾರಗಳ ಅಗತ್ಯವಿದೆ. ಸ್ಪರ್ಧೆಗಳಿದ್ದಷ್ಟೂ ಅವಕಾಶಗಳು ಹೆಚ್ಚಾಗುತ್ತಿವೆ.ವಿದ್ಯಾರ್ಥಿ ಜೀವನದಲ್ಲಿ ನಿರ್ದಿಷ್ಟ ಗುರಿ ಇಟ್ಟುಕೊಂಡು ನಿರಂತರ ಅಧ್ಯಯನ ಮಾಡುವುದು ಸೂಕ್ತ. ಆಗ ಭವಿಷ್ಯದ ಬದುಕು ಉಜ್ವಲವಾಗುತ್ತದೆ.ಸಾಧನೆಯ ಹಾದಿಯಲ್ಲಿ ಪ್ರಯತ್ನವನ್ನು ಮುಂದೂಡುವ ಪ್ರವೃತ್ತಿ ತೊರೆದು ಕಾರ್ಯಶೀಲತೆಯನ್ನು ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು.
ವೇದಿಕೆಯಲ್ಲಿ ನರೇಂದ್ರ ಪ.ಪೂ.ಕಾಲೇಜಿನ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕರಾದ ಸಂತೋಷ ಬಿ., ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ದೀಪಾ ನಾಯಕ್ , ವಿದ್ಯಾರ್ಥಿ ಸಂಘದ ನಾಯಕನಾದ ದ್ವಿತೀಯ ವಾಣಿಜ್ಯ ವಿಭಾಗದ ಸೃಜನ್ ಕೆ.ಪಿ., ಕಾರ‍್ಯದರ್ಶಿಯಾದ ದ್ವಿತೀಯ ವಿಜ್ಞಾನ ವಿಭಾಗದ ಆಶಿಕಾ ರಾವ್ ,ಪ್ರಥಮ ವಾಣಿಜ್ಯ ವಿಭಾಗದ ಹರ್ಷಿತಾ ಉಪಸ್ಥಿತರಿದ್ದರು.
ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷರಾದ ಕಬಕ ಸತೀಶ್ ರಾವ್,ನಿರ್ದೇಶಕರಾದ ಶಿವಪ್ರಸಾದ್ ಇ., ಕೋಶಾಧಿಕಾರಿಗಳಾದ ಅಚ್ಯುತ ನಾಯಕ್, ಕಾರ್ಯನಿರ್ವಹಣಾಧಿಕಾರಿಯಾದ ಲಕ್ಷ್ಮೀಪ್ರಸಾದ್, ಸದಸ್ಯರಾದ ಶ್ರೀನಿವಾಸ ಪೈ, ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನೋಲಜಿ ಇದರ ಆಡಳಿತ ಮಂಡಳಿಯ ಸಂಚಾಲಕರಾದ ಟಿ.ಎಸ್. ಸುಬ್ರಹ್ಮಣ್ಯ ಭಟ್,ಕೋಶಾಧಿಕಾರಿಗಳಾದ ಮುರಳೀಧರ, ಪ್ರಾಧ್ಯಾಪಕರಾದ ವಂದನಾ ಶಂಕರ್,ಚೇತನ್, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಸತೀಶ್‌ಕುಮಾರ್ ರೈ, ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ರಮೇಶ್ಚಂದ್ರ, ಸಂಚಾಲಕರಾದ ವಸಂತ ಸುವರ್ಣ, ಸದಸ್ಯರಾದ ಅಶೋಕ್ ಕುಂಬ್ಳೆ, ಮುಖ್ಯೋಪಾಧ್ಯಾಯರಾದ ಆಶಾ ಬೆಳ್ಳಾರೆ, ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಉಪಮುಖ್ಯೋಪಾಧ್ಯಾಯರಾದ ನಳಿನಿ ವಾಗ್ಲೆ, ನರೇಂದ್ರ ಪ.ಪೂ.ಕಾಲೇಜಿನ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಮೋಹಿನಿ ದಿವಾಕರ, ಉಮೇಶ್ ನಾಯಕ್, ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷರಾದ ತಿಲಕ್ ರೈ, ವಿಶ್ವಹಿಂದು ಪರಿಷತ್ ಇದರ ನಗರಾಧ್ಯಕ್ಷರಾದ ದಾಮೋದರ ಪಾಟಾಳಿ, ಹಿರಿಯ ವಿದ್ಯಾರ್ಥಿಗಳು, ಮತ್ತು ಪೋಷಕ ವೃಂದ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
2024-25ನೇ ಸಾಲಿನಲ್ಲಿ ಶೈಕ್ಷಣಿಕ,ಕ್ರೀಡೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು ಮತ್ತು ವಿಜ್ಞಾನ ಸಂಘ,ವಾಣಿಜ್ಯ ಸಂಘ ಮತ್ತು ವಾರ್ಷಿಕೋತ್ಸವದ ಪ್ರಯುಕ್ತ ನಡೆಸಿದ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ನೀಡಲಾಯಿತು. ಉಪನ್ಯಾಸಕರಾದ ರೇಣುಕಾ ಸಾಧಕ ವಿದ್ಯಾರ್ಥಿಗಳ ಹೆಸರು ವಾಚಿಸಿದರು. ಕೂರ್ನಡ್ಕದ ಮಾಧವ ಪ್ರಭು ಇವರು ಪ್ರತಿಭಾವಂತ ವಿದ್ಯಾರ್ಥಿಗೆ ಶೈಕ್ಷಣಿಕ ಪ್ರೋತ್ಸಾಹಧನವನ್ನು ನೀಡಿದರು. ನೂತನ ಸಭಾಂಗಣದ ಗುತ್ತಿಗೆದಾರರಾದ ಶ್ರೀಧರ ಭಟ್ ಇವರನ್ನು ಸನ್ಮಾನಿಸಲಾಯಿತು.
ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ಕಾಲೇಜಿನ ವಾರ್ಷಿಕ ವರದಿಯನ್ನು ಮಂಡಿಸಿದರು. ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಕಾಂತ ಕೊಳತ್ತಾಯರವರು ಸ್ವಾಗತಿಸಿ, ಉಪನ್ಯಾಸಕರಾದ ಶಶಿಕಲಾ ವಂದಿಸಿದರು. ಉಪನ್ಯಾಸಕರಾದ ಮಧುರಾ ಕಾರ‍್ಯಕ್ರಮವನ್ನು ನಿರೂಪಿಸಿದರು. ಬಳಿಕ ವಿವಿಧ ಸಾಂಸ್ಕೃತಿಕ ಕಾರ‍್ಯಕ್ರಮಗಳು ನಡೆಯಿತು.