ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪುತ್ತೂರು ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಇದರ ಸಾರಥ್ಯದಲ್ಲಿ ಇತಿಹಾಸ ಪ್ರಸಿದ್ಧ ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಡಿ.28 ,29 ರಂದು ಜರಗುವ ದ್ವಿತೀಯ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಧರ್ಮಸಂಗಮ ಕಾರ್ಯಕ್ರಮದ ಚಪ್ಪರ ಮುಹೂರ್ತಕ್ಕೆ ಭೂಮಿ ಪೂಜೆ ಡಿ.16ರಂದು ನೆರವೇರಿತು. ಇದೇ ಸಂದರ್ಭ ಓಂಕಾರ ಧ್ವಜ ಅಳವಡಿಸಲಾಯಿತು. ಬಳಿಕ ಶ್ರೀಗಳು ಕಾರ್ಯಾಲಯದಲ್ಲಿ ನಿಧಿ ಕುಂಭಕ್ಕೆ ಚಾಲನೆ ನೀಡಿದರು.
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅರ್ಚಕ ವೇ ಮೂ ಜಯರಾಮ ಜೋಯಿಷ ಅವರು ಚಪ್ಪರ ಮುಹೂರ್ತದ ಭೂಮಿ ಪೂಜೆ ನೆರವೇರಿಸಿದರು. ಮಾಣಿ ಶ್ರೀ ದಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಅವರು ಚಪ್ಪರಮುಹೂರ್ತ ನೆರವೇರಿಸಿದರು.
ಈ ಸಂದರ್ಭ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಸಂಚಾಲಕ ಅರುಣ್ ಕುಮಾರ್ ಪುತ್ತಿಲ, ಅಧ್ಯಕ್ಷ ಶಿವಪ್ರಸಾದ್ ಇಜ್ಜಾವು, ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಅಧ್ಯಕ್ಷ ಮಹೇಂದ್ರ ವರ್ಮ ಬಜತ್ತೂರು, ಪ್ರಸನ್ನ ಮಾರ್ತ, ಸ್ವಾಗತ ಸಮಿತಿ ಸಂಚಾಲಕ ಅನಿಲ್ ತೆಂಕಿಲ, ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಉಮೇಶ್ ಕೋಡಿಬೈಲು, ಸಂಚಾಲಕ ಮನೀಶ್ ಕುಲಾಲ್, ಸಮಿತಿಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ರೈ ಕೆದಂಬಾಡಿಮಠ, ಬಾಲಕೃಷ್ಣ ಬೋರ್ಕರ್, ಪ್ರವೀಣ್ ನಾಕ್, ಚಿನ್ಮಯ್ ರೈ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.