ಪುತ್ತೂರು: ಅಂತರರಾಷ್ಟ್ರೀಯ ರೋಟರಿ ಜಿಲ್ಲೆ 3181, ವಲಯ ಐದರ ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ಗೆ ರೋಟರಿ ಜಿಲ್ಲಾ ಗವರ್ನರ್ ವಿಕ್ರಂ ದತ್ತರವರು ಡಿ.17 ರಂದು ಅಧಿಕೃತ ಭೇಟಿ ನೀಡಲಿದ್ದಾರೆ.
ಪುತ್ತೂರು-ಬಪ್ಪಳಿಗೆ ಆಶ್ಮಿ ಕಂಫರ್ಟ್ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರೋಟರಿ ಅಸಿಸ್ಟೆಂಟ್ ಗವರ್ನರ್ ಸೂರ್ಯನಾಥ ಆಳ್ವ, ವಲಯ ಸೇನಾನಿ ಮೊಹಮ್ಮದ್ ರಫೀಕ್ ದರ್ಬೆರವರು ಭಾಗವಹಿಸಲಿದ್ದಾರೆ ಎಂದು ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ಅಧ್ಯಕ್ಷ ಪಿ.ಎಂ ಅಶ್ರಫ್, ಕಾರ್ಯದರ್ಶಿ ಬಿ.ವಸಂತ್ ಶಂಕರ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.