ಪುತ್ತೂರು: ಆರ್ಯಾಪು ಗ್ರಾಮದ ಬೂಡಿಯಾರು, ಹೊಸಮನೆ ಶ್ರೀಚಕ್ರರಾಜರಾಜೇಶ್ವರೀ ದೇವಸ್ಥಾನದಲ್ಲಿ ಡಿ.14ರಿಂದ 15ರವರೆಗೆ ಕುಕ್ಕಾಡಿ ತಂತ್ರಿ ಪ್ರೀತಮ್ ಪುತ್ತೂರಾಯರವರ ನೇತೃತ್ವದಲ್ಲಿ ಜಾತ್ರೋತ್ಸವ ಹಾಗೂ ನೇಮೋತ್ಸವ ಕಾರ್ಯಕ್ರಮ ನಡೆಯಿತು.
ಡಿ.13ರಂದು ಬೆಳಿಗ್ಗೆ ದೇವತಾ ಪ್ರಾರ್ಥನೆ, ಉಗ್ರಾಣ ಪೂಜೆ, ಮರಾಠಿ ಭಜನಾ ತಂಡದಿಂದ ಕುಣಿತ ಭಜನೆ, ಅನ್ನಸಂತರ್ಪಣೆ ನಡೆಯಿತು. ಡಿ.14ರಂದು ಬೆಳಿಗ್ಗೆ ಗಣಪತಿ ಹವನ, ಕಲಶಪೂಜೆ, ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ಶ್ರೀದೇವರ ಬಲಿ ಹೊರಟು ಉತ್ಸವ, ದೇವರ ಸವಾರಿ, ಕಟ್ಟೆಪೂಜೆ, ಅನ್ನಸಂತರ್ಪಣೆ ನಡೆಯಿತು. ಡಿ.15ರಂದು ಬೆಳಿಗ್ಗೆ ಶ್ರೀದೇವರ ಬಲಿ ಹೊರಟು ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ದುರ್ಗಾಪೂಜೆ, ಚಾಮುಂಡೇಶ್ವರಿ ಭಜನಾ ಮಂಡಳಿಯವರಿಂದ ಭಜನಾ ಸೇವೆ, ಶ್ರೀರಕ್ತೇಶ್ವರಿ, ಪಂಜುರ್ಲಿ ದೈವಗಳ ಭಂಡಾರ ತೆಗೆದು ನೇಮೋತ್ಸವ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.
ದೇವಾಲಯದ ಆಡಳಿತ ಸಮಿತಿ ಅಧ್ಯಕ್ಷ ಗಂಗಾಧರ ಅಮೀನ್ ಹೊಸಮನೆ, ಕಾರ್ಯದರ್ಶಿ ಜಯಂತ ಶೆಟ್ಟಿ ಕಂಬಳತ್ತಡ್ಡ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸಿ.ಟಿ.ಸುರೇಶ್ ಹಾಗೂ ಸಮಿತಿ ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.