ಉಪ್ಪಿನಂಗಡಿ: ಇಲ್ಲಿನ ಬಸ್ ನಿಲ್ದಾಣದಲ್ಲಿ ಬಸ್ ಹಿಮ್ಮುಖವಾಗಿ ಚಲಿಸಿ ಬಸ್ಸನ್ನೇರಲು ಮುಂದಾದ ವಿದ್ಯಾರ್ಥಿಯೊರ್ವನ ಕಾಲಿನ ಮೇಲೆ ಬಸ್ಸಿನ ಚಕ್ರ ಹರಿದು ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡ ಘಟನೆ ಸೋಮವಾರ ಸಂಭವಿಸಿದೆ.
ಮಹಮ್ಮದ್ ಅಝೀಂ (18.ವ) ಗಾಯಗೊಂಡ ವಿದ್ಯಾರ್ಥಿ. ಈತ ಉಪ್ಪಿನಂಗಡಿಯ ಗಾಂಧಿಪಾರ್ಕ್ ನಿವಾಸಿ ಅಬ್ದುಲ್ ರಜಾಕ್ ಎಂಬವರ ಮಗನಾಗಿದ್ದು, ಮಂಗಳೂರಿನ ಅಲೋಸಿಯಸ್ ಕಾಲೇಜಿನಲ್ಲಿ ಪ್ರಥಮ ಬಿಸಿಎ ವಿದ್ಯಾರ್ಥಿಯಾಗಿದ್ದಾನೆ. ಈತ ಎಂದಿನಂತೆ ಕಾಲೇಜಿಗೆಂದು ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಬಸ್ಸನ್ನೇರಲು ಮುಂದಾಗಿದ್ದ ವೇಳೆ ಬಸ್ಸು ಹಿಮ್ಮುಖವಾಗಿ ಚಲಿಸಿದೆ ಎನ್ನಲಾಗಿದ್ದು, ಈ ವೇಳೆ ಆತನ ಕಾಲಿನ ಮೇಲೆ ಬಸ್ಸಿನ ಚಕ್ರ ಹರಿದು ಆತ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವುದಾಗಿ ಪೊಲೀಸರಿಗೆ ದೂರು ನೀಡಲಾಗಿದೆ.
ಬಸ್ಸಿನ ಚಾಲಕ ಧನ್ಯರಾಜ್ ವಿರುದ್ದ ಪ್ರಕರಣ ದಾಖಲಿಸಿದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.