ರಾಮಕುಂಜ: ಶ್ರೀ ಶಾರದಾ ಜ್ಞಾನವಿಕಾಸ ಕೇಂದ್ರ ಉದ್ಘಾಟನೆ

0

ರಾಮಕುಂಜ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕಡಬ ತಾಲೂಕು ಇದರ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಗೋಳಿತ್ತೊಟ್ಟು ವಲಯದ ರಾಮಕುಂಜದಲ್ಲಿ ಶ್ರೀ ಶಾರದಾ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ ರಾಮಕುಂಜ ಗ್ರಾ.ಪಂ.ಸಭಾಭವನದಲ್ಲಿ ನಡೆಯಿತು.



ಶ್ರೀ ರಾಮಕುಂಜೇಶ್ವರ ಪ್ರೌಢಶಾಲೆಯ ಮುಖ್ಯಶಿಕ್ಷಕ ಸತೀಶ್ ಭಟ್ ಅವರು ಉದ್ಘಾಟಿಸಿ ಮಾತನಾಡಿ, ಜ್ಞಾನ ವಿಕಾಸ ಕಾರ್ಯಕ್ರಮದ ಮೂಲಕ ಮಹಿಳೆಯರು ಸಂಘಟಿತರಾಗಿ ಸ್ವ ಉದ್ಯೋಗವನ್ನು ಮಾಡಿಕೊಂಡು ಆರ್ಥಿಕ, ಸಾಮಾಜಿಕವಾಗಿ ಪ್ರಬಲರಾಗುವಂತೆ ಹೇಳಿ ಶುಭಹಾರೈಸಿದರು. ಅತಿಥಿಯಾಗಿದ್ದ ತಾ.ಪಂ.ಸದಸ್ಯೆ ತೇಜಸ್ವಿನಿ ಕಟ್ಟಪುಣಿ, ರಾಮಕುಂಜ ಗ್ರಾ.ಪಂ.ಅಧ್ಯಕ್ಷೆ ಸುಚೇತಾ ಶುಭ ಹಾರೈಸಿದರು. ಜ್ಞಾನವಿಕಾಸದ ಸಂಯೋಜಕಿ ಪ್ರಮೀಳಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಜ್ಞಾನವಿಕಾಸ ಸಮನ್ವಯಾಧಿಕಾರಿ ಚೇತನ ಪ್ರಾಸ್ತಾವಿಕವಾಗಿ ಮಾತನಾಡಿದರು. ವಲಯ ಮೇಲ್ವಿಚಾರಕಿ ಜಯಶ್ರೀ ಕಾರ್ಯಕ್ರಮ ನಿರೂಪಿಸಿದರು. ಸೇವಾ ಪ್ರತಿನಿಧಿ ಸುಮಲತಾ ಸ್ವಾಗತಿಸಿದರು. ಸೇವಾ ಪ್ರತಿನಿಧಿ ಜಯಶ್ರೀ ವಂದಿಸಿದರು. ಸೇವಾಪ್ರತಿನಿಧಿ ಪ್ರೇಮಾವತಿ ಸಹಕರಿಸಿದರು. ಜ್ಞಾನ ವಿಕಾಸ ಕೇಂದ್ರದ ಸದಸ್ಯರು, ಹಳೆನೇರೆಂಕಿ ಒಕ್ಕೂಟದ ಅಧ್ಯಕ್ಷೆ ಸವಿತಾ ಹಾಗೂ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಪ್ರಗತಿ ಬಂಧು ಸ್ವಸಹಾಯ ಸಂಘದ ಮೂಲಕ ಸಾಲ ಸೌಲಭ್ಯವನ್ನು ಪಡೆದು ಉತ್ತಮ ಆರ್ಥಿಕ ವ್ಯವಹಾರವನ್ನು ನಡೆಸುತ್ತಿರುವ ಸಂಘಗಳಿಗೆ ಲಾಭಾಂಶವನ್ನು ವಿತರಣೆ ಮಾಡಲಾಯಿತು.

LEAVE A REPLY

Please enter your comment!
Please enter your name here