ಪುತ್ತೂರು: ಬ್ಯಾಂಕ್ ಆಫ್ ಬರೋಡಾ ಪ್ರಾಯೋಜಿತ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು, ಕೆದಂಬಾಡಿ ಗ್ರಾಮ ಸಮಿತಿ ಹಾಗೂ ಶ್ರೀರಾಮ ಮಂದಿರ ಕೆದಂಬಾಡಿ ಶ್ರೀ ಕ್ಷೇತ್ರ ಸನ್ಯಾಸಿಗುಡ್ಡೆ ಇದರ ಆಶ್ರಯದಲ್ಲಿ ಜಸ್ಟೀಸ್ ಕೆ. ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ, ಎ.ಬಿ. ಶೆಟ್ಟಿ ಮೆಮೊರಿಯಲ್ ಇನ್‌ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್ ದೇರಳಕಟ್ಟೆ ಮಂಗಳೂರು ಇಲ್ಲಿನ ವೈದ್ಯರಿಂದ ‘ಉಚಿತ ದಂತ, ಕಣ್ಣು, ಮತ್ತು ವೈದ್ಯಕೀಯ ತಪಾಸಣಾ ಶಿಬಿರವು ದ.21ರಂದು ಕೆದಂಬಾಡಿ ಸನ್ಯಾಸಿಗುಡ್ಡೆ ಡಾ.ಎಸ್.ಆರ್. ಗೋಪಾಲನ್ ನಾಯರ್ ಸಭಾಂಗಣದಲ್ಲಿ ನಡೆಯಲಿದೆ. ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಆಯೋಜಕರ ಪ್ರಕಟಣೆ ತಿಳಿಸಿದೆ.