ಕಾವು: ಬುಶ್ರಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಡಿ.11 ಮತ್ತು ಡಿ.12 ರಂದು ವಾರ್ಷಿಕ ಕ್ರೀಡಾಕೂಟ ನಡೆಯಿತು. ಕ್ರೀಡಾಕೂಟದ ಆರಂಭದ ದಿನ ಸಂಸ್ಥೆಯ ಅಧ್ಯಕ್ಷ ಅಬ್ದುಲ್ ಅಝೀಜ್ ರವರು ಧ್ವಜಾರೋಹಣ ಮಾಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಉದ್ಘಾಟಕರಾಗಿ ಆಗಮಿಸಿದ ಪಂಜ ಉಪವಲಯ ಅರಣ್ಯ ಅಧಿಕಾರಿ ಸಂತೋಷ್ ರೈಯವರು ಕ್ರೀಡಾ ಜ್ಯೋತಿಯೊಂದಿಗೆ ದೀಪ ಪ್ರಜ್ವಲನ ಮಾಡಿ ಕ್ರೀಡಾಕೂಟವನ್ನು ಉದ್ಘಾಟಿಸಿ ವಿದ್ಯಾರ್ಥಿಗಳು ತಮ್ಮ ಶಿಕ್ಷಣದಲ್ಲಿ ಪಠ್ಯೇತರ ವಿಷಯಗಳೊಂದಿಗೆ ತಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕಾಗಿ ಪಠ್ಯೇತರ ಚಟುವಟಿಕೆಯಲ್ಲಿ ಒಂದಾದ ಕ್ರೀಡೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಹಿತವಚನ ಹೇಳಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಪಾಣಾಜೆ ಉಪವಲಯ ಅರಣ್ಯ ಅಧಿಕಾರಿ ಮದನ್ ಇವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ವೇದಿಕೆಯಲ್ಲಿ ಶಿಕ್ಷಕರಕ್ಷಕರ ಸಂಘದ ಅಧ್ಯಕ್ಷ ಅಬ್ದುಲ್ ಖಾದರ್ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕ್ರೀಡಾಕೂಟದ ಕಾರ್ಯಕ್ರಮದಲ್ಲಿ ಉಪವಲಯ ಅರಣ್ಯ ಅಧಿಕಾರಿ ಸಂತೋಷ್ ರೈಯವರನ್ನು ಸಂಸ್ಥೆಯ ಪರವಾಗಿ ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಆಡಳಿತ ಮಂಡಳಿ ನಿರ್ದೇಶಕ ಬದ್ರುದ್ದೀನ್, ಶಿಕ್ಷಕರ ರಕ್ಷಕ ಸಂಘದ ಪದಾಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸಂಸ್ಥೆಯ ಮುಖ್ಯಗುರು ದೀಪಿಕಾ ಚಾಕೋಟೆ ಎಲ್ಲರನ್ನೂ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಹಿರಿಯ ಶಿಕ್ಷಕಿ ಹೇಮಲತಾ ಕಜೆಗದ್ದೆ ಕಾರ್ಯಕ್ರಮ ನಿರೂಪಿಸಿದರು. ಶೈಕ್ಷಣಿಕ ಸಲಹೆಗಾರ ಕೃಷ್ಣ ಪ್ರಸಾದ್ ವಂದಿಸಿದರು.