ಪುತ್ತೂರು: ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಹಿರಿಯ ವಿದ್ಯಾರ್ಥಿಗಳ ದಿನಾಚರಣೆಯನ್ನು ಡಿಸೆಂಬರ್ 14 ರಂದು ಅವಿಯುಕ್ತ-2024 ಎಂಬ ನಾಮದೇಯದೊಂದಿಗೆ ಆಚರಿಸಲಾಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ನಿಹಾಲ್ ಪಿ ಶೆಟ್ಟಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಂಸ್ಥೆಯ ಹಿರಿಯ ವಿದ್ಯಾರ್ಥಿ ಹಾಗೂ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಂಚಲಕರಾದ ಭರತ್ ಪೈ, ಸಂಸ್ಥೆಯ ಅಧ್ಯಕ್ಷರಾದ ಡಾ.ಎಂ. ಶಿವಪ್ರಕಾಶ್ ಹಾಗೂ ಸಂಸ್ಥೆಯ ಸಂಚಾಲಕರಾದ ರವಿನಾರಾಯಣ ಎಂ ಮತ್ತು ಸಂಸ್ಥೆಯ ಮುಖ್ಯೋಪಾಧ್ಯಾರಾದ ಸತೀಶ್ ಕುಮಾರ್ ರೈ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಅತಿಥಿ ಅಭ್ಯಾಗತರನ್ನು, ಹಿರಿಯ ವಿದ್ಯಾರ್ಥಿಗಳು, ಪೋಷಕರು, ಅಧ್ಯಾಪಕರ ವೃಂದ ಹಾಗೂ ವಿದ್ಯಾರ್ಥಿ ವೃಂದದ ಸಮಸ್ತರನ್ನು ಸಾತ್ವಿಕ್ ಆರ್.ಸಿ ಸ್ವಾಗತಿಸಿದರು. ಕಾರ್ಯಕ್ರಮವನ್ನು ಹಿರಿಯ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಆರಂಭಿಸಲಾಯಿತು. ಮುಖ್ಯ ಅತಿಥಿಗಳಾದ ಭರತ್ ಪೈ ವಿದ್ಯಾರ್ಥಿಗಳು ಶಾಲಾ ಶಿಕ್ಷಣದೊಂದಿಗೆ ಅಳವಡಿಸಿಕೊಳ್ಳಬೇಕಾದ ಜೀವನ ಮೌಲ್ಯಗಳ ಬಗ್ಗೆ ಮಾತುಗಳನ್ನಾಡಿದರು.
ಶಾಲಾ ಅಧ್ಯಕ್ಷರು ಮತ್ತು ಸಂಚಾಲಕರು ಸಂದರ್ಭೋಚಿತವಾಗಿ ಮಾತನಾಡಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಶಾಲಾ ಮುಖ್ಯೋಪಾಧ್ಯಾರಾದ ಸತೀಶ್ ಕುಮಾರ್ ರೈ ಇವರು ಹಿರಿಯ ವಿದ್ಯಾರ್ಥಿಗಳು ಶಾಲೆಯೊಂದಿಗೆ ನಿರಂತರ ಮತ್ತು ನಿಕಟ ಸಂಬಂಧವನ್ನು ಇರಿಸಿಕೊಂಡು ಶಾಲಾ ರಾಯಾಭಾರಿಗಳಾಗಬೇಕೆಂದು ವಿನಂತಿಸಿಕೊಂಡರು. ಸಮಾರಂಭದಲ್ಲಿ ಕಳೆದ ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಅಭಿನಂದನಾ ಕಾರ್ಯಕ್ರಮವನ್ನು ಸಭಾಧ್ಯಕ್ಷರಾದ ನಿಹಾಲ್ ಪಿ ಶೆಟ್ಟಿ ಮತ್ತು ಅತಿಥಿಗಳು ನಡೆಸಿಕೊಟ್ಟರು.
ಸನ್ಮಾನ ಕಾರ್ಯಕ್ರಮ :
ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಅಮೂಲ್ಯ ಸೇವೆಯನ್ನು ಪರಿಗಣಿಸಿ ನೀಡಲಾಗುವ ಬೆಸ್ಟ್ ಪ್ರಿನ್ಸಿಪಾಲ್ ಅವಾರ್ಡ್ ಪ್ರಶಸ್ತಿಗೆ ಭಾಜನರಾದ ಶಾಲಾ ಮುಖ್ಯ ಗುರುಗಳಾದ ಸತೀಶ್ ಕುಮಾರ್ ರೈ ಎಸ್ ಅವರನ್ನು ಪ್ರಶಸ್ತಿ ಪತ್ರ ನೀಡಿ ಶಾಲು ಹೊದಿಸಿ ಸನ್ಮಾನಿಸಲಾಯಿತು. ಸನ್ಮಾನ ಕಾರ್ಯಕ್ರಮವನ್ನು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಿಹಾಲ್ ಪಿ ಶೆಟ್ಟಿ, ಹಿರಿಯ ವಿದ್ಯಾರ್ಥಿಗಳಾದ ಭರತ್ ಪೈ, ನರಸಿಂಹ ಪೈ ಹಾಗೂ ಶಾಲಾ ಅಧ್ಯಕ್ಷರಾದ ಡಾ.ಎಂ ಶಿವಪ್ರಕಾಶ್ ಮತ್ತು ಸಂಚಾಲಕರಾದ ರವಿನಾರಾಯಣ ಎಂ ಅವರುಗಳು ನೆರವೇರಿಸಿಕೊಟ್ಟರು. ಹಿರಿಯ ವಿದ್ಯಾರ್ಥಿನಿ ಸಮೃದ್ಧಿ ಜೆ ಶೆಟ್ಟಿಯವರು ಸನ್ಮಾನ ಪತ್ರವನ್ನು ವಾಚಿಸಿದರು.
ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಹಾಗೂ ಸಮಾರಂಭದ ಅಧ್ಯಕ್ಷರಾದ ನಿಹಾಲ್ ಪಿ ಶೆಟ್ಟಿ ತನ್ನ ಶಾಲಾ ದಿನಗಳನ್ನು ಸ್ಮರಿಸುತ್ತಾ ಹಿರಿಯ ವಿದ್ಯಾರ್ಥಿ ಸಂಘ ಶಾಲಾ ಅಭಿವೃದ್ಧಿಯ ಕೆಲಸ ಕಾರ್ಯಗಳಲ್ಲಿ ಕೈ ಜೋಡಿಸುವ ಬಗ್ಗೆ ಭರವಸೆಯನ್ನು ಅಧ್ಯಕ್ಷೀಯ ಭಾಷಣದಲ್ಲಿ ನೀಡಿದರು. ಸಮಾರಂಭವು ಸಾನ್ವಿ ಎಸ್.ಪಿ ಅವರ ವಂದನಾರ್ಪನೆಯೊಂದಿಗೆ ಸಂಪನ್ನಗೊಂಡಿತು. ದಂತ ವೈದ್ಯಕೀಯ ವಿದ್ಯಾರ್ಥಿ ಶಶಾಂಕ್ ಸಭಾ ಕಾರ್ಯಕ್ರಮವನ್ನು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಿರ್ವಹಿಸಿದರು. ಹಿರಿಯ ವಿದ್ಯಾರ್ಥಿಗಳಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿತು.