ಪುತ್ತೂರು : ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಮಂಗಳೂರು, ನೇತ್ರಾವತಿ ವಲಯ ಕಡಬ ಹಾಗೂ ಪತಂಜಲಿ ಯೋಗ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ, ತುಮಕೂರು ಇದರ ವತಿಯಿಂದ ಡಿ. 29ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದ ರಥ ಬೀದಿಯಲ್ಲಿ ಸಾಮೂಹಿಕ ಯೋಗ ಷಣ್ಮುಖ ನಮಸ್ಕಾರ ನಡೆಯಲಿದೆ. ಈ ಯೋಗ ಶಿಬಿರದಲ್ಲಿ ರಾಜ್ಯಾದ್ಯಂತ ಸುಮಾರು 3000 ಯೋಗಾಸಕ್ತರು ಭಾಗವಹಿಸಲಿರುವರೆಂದು ಸಂಘಟಕರು ತಿಳಿಸಿರುತ್ತಾರೆ.