ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನೂತನ ಸಮಿತಿ ಪ್ರಕಟ ಬೆನ್ನಲ್ಲೇ ಅಸಮಾಧಾನ- ಬೂತ್ ಅಧ್ಯಕ್ಷ ಸ್ಥಾನಕ್ಕೆ ಸುದೇಶ್ ಕುಮಾರ್ ರಾಜೀನಾಮೆ

0

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನೂತನ ಸಮಿತಿ ಘೋಷಣೆಯಾಗುತ್ತಿದ್ದಂತೆ ಅಸಮಾಧಾನದ ಹೊಗೆಯಾಡುತ್ತಿದ್ದು, ಅರ್ಜಿ ಸಲ್ಲಿಸಿದ್ದ ಸುದೇಶ್ ಕುಮಾರ್ ಕಾಂಗ್ರೆಸ್ ಪಕ್ಷದ ಕೊಂಬೆಟ್ಟು ವಾರ್ಡ್ ನ ಬೂತ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ಬ್ಲಾಕ್ ಅಧ್ಯಕ್ಷ ಕೃಷ್ಣ ಪ್ರಸಾದ್ ಆಳ್ವ ರವರಿಗೆ ಪತ್ರ ಬರೆದಿರುವುದಾಗಿ ತಿಳಿದು ಬಂದಿದೆ.

ತಾನು ಕಳೆದ 35 ವರ್ಷಗಳಿಂದ ಕಾಂಗ್ರೆಸ್‌ ಕಾರ್ಯಕರ್ತನಾಗಿ ಕೊಂಬೆಟ್ಟು ವಾರ್ಡ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಪಕ್ಷದ ಎಲ್ಲಾ ಚಟುವಟಿಗಳಲ್ಲಿ ಸಕ್ರಿಯವಾಗಿ ಭಾಗಿಯಾಗುತ್ತಿದ್ದೇನೆ. ಪಕ್ಷದ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದೇನೆ. ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ನಾಮ ನಿರ್ದೇಶನಕ್ಕೆ ಅರ್ಜಿ ಸಲ್ಲಿಸಿದ್ದು, ಪ್ರಬಲ ಆಕಾಂಕ್ಷಿಯೂ ಆಗಿದ್ದೆ, ದೇವಸ್ಥಾನದ ಪ್ರತಿಯೊಂದು ಚಟುವಟಿಕೆಗಳಲ್ಲೂ ಸಕ್ರಿಯವಾಗಿ ಭಾಗವಹಿಸುತ್ತಿದ್ದು, ಆದರೂ ನನ್ನನ್ನು ಆಯ್ಕೆ ಮಾಡದ ಹಿನ್ನಲೆ ಮನನೊಂದು ಪಕ್ಷದ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here