ದ.21: ಕೌಡಿಚ್ಚಾರು ಕುತ್ಯಾಡಿ ಶ್ರೀಕಾರಂ ಮನೆಯಲ್ಲಿ ಶ್ರೀ ಸತ್ಯನಾರಾಯಣ ಪೂಜೆ,ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

0

ಪುತ್ತೂರು: ಅರಿಯಡ್ಕ ಗ್ರಾಮದ ಕೌಡಿಚ್ಚಾರು ಸಮೀಪದ ಕುತ್ಯಾಡಿ ಶ್ರೀಕಾರಂ ಮನೆಯಲ್ಲಿ ದ.21 ರಂದು ಬೆಳಿಗ್ಗೆ ಶ್ರೀ ಗಣಪತಿ ಹೋಮ, ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಂಜೆ 6 ರಿಂದ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ ಸಹಯೋಗದೊಂದಿಗೆ `ಶ್ರೀ ದೇವಿ ಮಹಾತ್ಮೆ’ ಎಂಬ ಪೌರಾಣಿಕ ಯಕ್ಷಗಾನ ಬಯಲಾಟ ನಡೆಯಲಿದೆ. ಸಂಜೆ 6 ಗಂಟೆಗೆ ಶ್ರೀ ದೇವಿಯ ಚೌಕಿ ಪೂಜೆ ನಡೆಯಲಿದ್ದು ಬಳಿಕ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನಡೆಯಲಿದೆ.


ದ.22 ರಂದು ರಾತ್ರಿ 8 ರಿಂದ ಶ್ರೀ ಕಲ್ಲುರ್ಟಿ ಮತ್ತು ಶ್ರೀ ಕೊರಗಜ್ಜ ದೈವಗಳ ನೇಮೋತ್ಸವವು ವಿಜೃಂಭಣೆಯಿಂದ ಜರಗಲಿದೆ. ಎರಡು ದಿನಗಳಲ್ಲಿ ನಡೆಯುವ ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಿಗೆ ಭಕ್ತಾಧಿಗಳು, ಯಕ್ಷಗಾನ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ದೈವ ದೇವರ ಪ್ರಸಾದ ಸ್ವೀಕರಿಸುವಂತೆ ಶ್ರೀಕಾರಂ ಕುತ್ಯಾಡಿ ಮನೆಯ ತಿಮ್ಮಪ್ಪ ಭಂಡಾರಿ ಹಾಗೂ ಮನೆಯವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here