ಕಾಣಿಯೂರು: ಬೊಬ್ಬೆಕೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವವು ಡಿ .28ರಂದು ನಡೆಯಲಿದ್ದು, ಕಾರ್ಯಕ್ರಮದ ಅಂಗವಾಗಿ ಶಾಲಾ ಸುತ್ತ ಮುತ್ತ ಸ್ವಚ್ಛತಾ ಕಾರ್ಯಕ್ರಮವನ್ನು ಡಿ 19ರಂದು ನಡೆಸಲಾಯಿತು.
ಈ ಸಂದರ್ಭದಲ್ಲಿ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷೆ ಸುನೀತಾ ಗಣೇಶ್, ಉಪಾಧ್ಯಕ್ಷ ರಮೇಶ್ ಉಪ್ಪಡ್ಕ, ಶಾಲಾ ಮುಖ್ಯಗುರು ಶಶಿಕಲಾ, ಎಸ್ ಡಿ ಎಂ ಸಿ ಮಾಜಿ ಅಧ್ಯಕ್ಷರಾದ ತೀರ್ಥಕುಮಾರ್ ಪೈಕ, ಸದಾನಂದ ಕಡೀರ, ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರೀಶ್ ಪೈಕ, ಕೋಶಾಧಿಕಾರಿ ಸುಕುಮಾರ್ ಕಲ್ಪಡ ಹಾಗೂ ಎಸ್ ಡಿ ಎಂ ಸಿ ಸದಸ್ಯರು, ಪೋಷಕರು, ಶಿಕ್ಷಕರು ಉಪಸ್ಥಿತರಿದ್ದರು.