ಪುತ್ತೂರು: ಮಾಯ್ ದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಸಂತ ಫಿಲೋಮಿನಾ ಅನುದಾನಿತ ಪ್ರೌಢಶಾಲೆಯ 75ನೇ ವರ್ಷದ ಅಮೃತ ಮಹೋತ್ಸವ ಮತ್ತು ಶಾಲಾ ವಾರ್ಷಿಕೋತ್ಸವ ಸಮಾರಂಭ ಶಾಲಾ ಪ್ರಾಂಗಣದಲ್ಲಿ ಡಿ.20ರಂದು ಬೆಳಿಗ್ಗೆ 10ರಿಂದ ನಡೆಯಲಿದೆ.
ಬೆಳಿಗ್ಗೆ 10ರಿಂದ ಸಭಾ ಕಾರ್ಯಕ್ರಮ ನಡೆಯಲಿದ್ದು ,ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಹಾಗೂ ಮಂಗಳೂರು ಕೆಥೋಲಿಕ್ ಶಿಕ್ಷಣ ಮಂಡಳಿಯ ಅಧ್ಯಕ್ಷ ಡಾ|ಪೀಟರ್ ಪಾವ್ಲ್ ಸಲ್ಡಾನ್ಹ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಲಾ ಹಿರಿಯ ವಿದ್ಯಾರ್ಥಿ ಹಾಗೂ ಬೆಂಗಳೂರಿನಲ್ಲಿ ವಕೀಲರಾಗಿರುವ ಎಸ್.ರಾಜಶೇಖರ್, ಶಾಲಾ ಶಿಕ್ಷಣ ಇಲಾಖೆಯ ದ.ಕ.ಜಿಲ್ಲಾ ಉಪನಿರ್ದೇಶಕ ವೆಂಕಟೇಶ ಸುಬ್ರಾಯ ಪಟಗಾರ್ ಭಾಗವಹಿಸಲಿದ್ದಾರೆ. ಗೌರವ ಅತಿಥಿಗಳಾಗಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಮಂಗಳೂರು ಕೆಥೋಲಿಕ್ ಶಿಕ್ಷಣ ಮಂಡಳಿಯ ಕಾರ್ಯದರ್ಶಿ ಡಾ|ಪ್ರವೀಣ್ ಲೀಯೊ ಲಸ್ರಾದೊ, ಶಾಲಾ ಹಿರಿಯ ವಿದ್ಯಾರ್ಥಿ ಹಾಗೂ ಪುತ್ತೂರು ನಗರಸಭಾ ಪೌರಾಯುಕ್ತ ಮಧು ಎಸ್.ಮನೋಹರ್, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್. ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮ ಬಳಿಕ ಅಪರಾಹ್ನ ೨ರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.