ನಾಳೆ (ಡಿ.20) ಬೆಟ್ಟಂಪಾಡಿ ಪ್ರಿಯದರ್ಶಿನಿ ಆಂಗ್ಲಮಾಧ್ಯಮ ಶಾಲಾ ವಾರ್ಷಿಕೋತ್ಸವ – ಬೆಳ್ಳಿಹಬ್ಬ ಲಾಂಛನ ಬಿಡುಗಡೆ

0

ಬೆಟ್ಟಂಪಾಡಿ: ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧೀನ ಸಂಸ್ಥೆಯಾದ ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಹಾಗೂ ಬೆಳ್ಳಿಹಬ್ಬ ಲಾಂಛನ ಬಿಡುಗಡೆ ಕಾರ್ಯಕ್ರಮವು ಡಿ.20 ರಂದು ನಡೆಯಲಿದೆ.


ಬೆಳಿಗ್ಗೆ ಶಾಲಾ ವಿದ್ಯಾರ್ಥಿಗಳಿಂದ ʻಏಕಾದಶಿ ಮಹಾತ್ಮೆʼ ಮತ್ತು ದ್ರೌಪದಿ ಪ್ರತಾಪʼ ಯಕ್ಷಗಾನ ಬಯಲಾಟ ನಡೆಯಲಿದೆ. ಸಂಜೆ ಕೆ.ಜಿ. ವಿಭಾಗ ಮತ್ತು ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.


ಲಾಂಛನ ಬಿಡುಗಡೆ

ಶಾಲೆಯು ಸ್ಥಾಪನೆಯಾಗಿ 25 ವರುಷಗಳು ನಡೆಯುತ್ತಿದ್ದು, ಮುಂದಿನ ಶೈಕ್ಷಣಿಕ ಸಾಲಿನಲ್ಲಿ ಇಡೀ ವರ್ಷ ಬೆಳ್ಳಿಹಬ್ಬ ಕಾರ್ಯಕ್ರಮಗಳು ನಡೆಯಲಿವೆ. ಈಗಾಗಲೇ ಇದರ ಸಮಿತಿಯನ್ನು ರಚಿಸಲಾಗಿದೆ. ಬೆಳ್ಳಿಹಬ್ಬದ ಲಾಂಛನ ಬಿಡುಗಡೆ ಹಾಗೂ ವಾರ್ಷಿಕೋತ್ಸವ ಸಮಾರಂಭವು ಸಂಜೆ ನಡೆಯಲಿದ್ದು, ಬೆಳ್ಳಿಹಬ್ಬ ಸಮಿತಿಯ ಅಧ್ಯಕ್ಷ ಶಶಿಕುಮಾರ್‌ ರೈ ಬಾಲ್ಯೊಟ್ಟುರವರು ಲಾಂಛನ ಬಿಡುಗಡೆಗೊಳಿಸಲಿದ್ದಾರೆ. ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ.ಎಂ. ಕೃಷ್ಣ ಭಟ್‌ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅಭ್ಯಾಗತರುಗಳಾಗಿ ಬೆಳ್ಳಿಹಬ್ಬ ಸಮಿತಿಯ ಗೌರವಾಧ್ಯಕ್ಷ, ನೋಟರಿ ನ್ಯಾಯವಾದಿ ಚಿದಾನಂದ ಬೈಲಾಡಿ, ಡೆಂಟಲ್‌ ಸರ್ಜನ್‌ ಡಾ. ಎಸ್‌. ಶ್ರೀಕೃಷ್ಣ ಭಟ್‌, ಉದ್ಯಮಿ ಸೀತಾರಾಮ ರೈ ಕೆದಂಬಾಡಿಗುತ್ತು, ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯ ಮುಖ್ಯಗುರು ಸತೀಶ್‌ ಕುಮಾರ್‌ ರೈ, ಬ್ಯಾಂಕ್‌ ಆಫ್‌ ಬರೋಡಾ ಬೆಟ್ಟಂಪಾಡಿ ಶಾಖೆಯ ಪ್ರಬಂಧಕ ಅನುಪ್‌ ಎಸ್.‌ ನಾಯ್ಕ್‌, ನ್ಯಾಯವಾದಿ ಉದಯಚಂದ್ರ, ಫಾಕ್ಸ್‌ಕಾನ್‌ ಪ್ರಿಸಿ಼ಷನ್‌ ಇಂಜಿನಿಯರಿಂಗ್‌ ಪ್ರೈ.ಲಿ. ನ ಕಿರಿಯ ಇಂಜಿನಿಯರ್‌, ಶಾಲಾ ಹಿರಿಯ ವಿದ್ಯಾರ್ಥಿನಿ, ಪೃಥ್ವಿ ನಡುಸಾರ್‌ ಭಾಗವಹಿಸಲಿದ್ದಾರೆ ಎಂದು ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ರಂಗನಾಥ ರೈ, ಸಂಚಾಲಕ ಡಾ. ಸತೀಶ್‌ ರಾವ್‌ ರವರು ತಿಳಿಸಿದ್ದಾರೆ. 

LEAVE A REPLY

Please enter your comment!
Please enter your name here